ADVERTISEMENT

ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಹೃದಯಾಘಾತದಿಂದ ನಿಧನ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2019, 18:42 IST
Last Updated 22 ಮಾರ್ಚ್ 2019, 18:42 IST
   

ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್‌.ಶಿವಳ್ಳಿ (57) ಶುಕ್ರವಾರ ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಕುಂದಗೋಳ ತಾಲ್ಲೂಕಿನ ಯರಗುಪ್ಪಿಯಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಲಿದೆ.

ಕುಂದಗೋಳ ಕ್ಷೇತ್ರದಿಂದ ಮೂರು ಬಾರಿ ಚುನಾಯಿತರಾಗಿದ್ದ ಅವರು ಡಿಸೆಂಬರ್‌ನಲ್ಲಿ ಎಚ್‌.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸಿದ್ದರಾಮಯ್ಯ, ಮುಖ್ಯಮಂತ್ರಿಯಾಗಿದ್ದಾಗ ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ADVERTISEMENT

ಕುಂದಗೋಳದಲ್ಲಿ ಡಾ.ರಾಜಕುಮಾರ್‌ ಅಭಿಮಾನಿಗಳ ಸಂಘ ಕಟ್ಟಿ, ಅದರ ಅಧ್ಯಕ್ಷರಾಗಿದ್ದರು. ಬಳಿಕ ಎಸ್‌. ಬಂಗಾರಪ್ಪ ನೇತೃತ್ವದ ಕೆಸಿಪಿ ಮೂಲಕ ರಾಜಕೀಯ ಪ್ರವೇಶಿಸಿದ್ದರು.

ಸಚಿವರು ಮಧ್ಯಾಹ್ನ 1.30 ರ ಹೊತ್ತಿನಲ್ಲಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದಾಗ ಹೃದಯಾಘಾತವಾಗಿದೆ. ಕೂಡಲೇ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆ ತರಲಾಯಿತು. ಚಿಕಿತ್ಸೆ ಫಲಿಸದೇ ಶಿವಳ್ಳಿ ಮೃತಪಟ್ಟರುಎಂದು ಅವರ ಆಪ್ತರು ತಿಳಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಕುಟುಂಬದ ಸದಸ್ಯರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದಾರೆ. ಶಿವಳ್ಳಿ ಅವರುಕುಂದಗೋಳ ಕ್ಷೇತ್ರದಿಂದ ಆರಿಸಿ ಬಂದಿದ್ದರು.

‘ಈ ಹಿಂದೆ ಎರಡು ಬಾರಿ ಲಘು ಹೃದಯಾಘಾತವಾಗಿತ್ತು ಹಾಗೂಬೈಪಾಸ್ ಸರ್ಜರಿ ಆಗಿತ್ತು. ಈ ಸಂಬಂಧ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು’ಎಂದು ಅವರ ಸಹೋದರ ಅಡಿವೆಪ್ಪ ಶಿವಳ್ಳಿ‘ಪ್ರಜಾವಾಣಿ’ಗೆ ತಿಳಿಸಿದರು.

ಗುರುವಾರ ಮಧ್ಯರಾತ್ರಿಯವರೆಗೂ ಧಾರವಾಡದ ಕಟ್ಟಡ ದುರಂತ ಸ್ಥಳದಲ್ಲಿ ಖುದ್ದು ಹಾಜರಿದ್ದು, ಪರಿಹಾರ ಕಾರ್ಯಗಳಲ್ಲಿ ಭಾಗಿಯಾಗಿದ್ದರು. ಮಾರ್ಚ್ 20ರಿಂದ ಸತತವಾಗಿ ದುರಂತದ ಸ್ಥಳದಲ್ಲಿಯೇ ಬೀಡು ಬಿಟ್ಟು ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದರು. ಈ ಸಂದರ್ಭತೀವ್ರ ಬಳಲಿದಂತೆ ಕಂಡು ಬಂದ ಶಿವಳ್ಳಿ. ನಂತರ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದರು.ಗುರುವಾರ ಶೋರೂಂನಲ್ಲಿಯೇ ವಿಶ್ರಾಂತಿ ತೆಗೆದುಕೊಂಡಿದ್ದರು.

ಬಹಳ ವರ್ಷಗಳಿಂದಲೂ ಹೃದಯದ ಕಾಯಿಲೆಯಿಂದ ಬಳಲುತ್ತಿರುವ ಸಿ.ಎಸ್. ಶಿವಳ್ಳಿ ಅವರಿಗೆಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಪದೇಪದೆಕೆಮ್ಮು ಬರುತ್ತಿತ್ತು. ಈ ಸಮಯದಲ್ಲಿಯೇ ಹೃದಯಾಘಾತವಾಗಿದೆ.

ಮೂರು ಬಾರಿ ಶಾಸಕರಾಗಿದ್ದರು

ಸಿ.ಎಸ್‌.ಶಿವಳ್ಳಿ ಎಂದೇ ಜನಪ್ರಿಯರಾಗಿದ್ದಚನ್ನಬಸಪ್ಪ ಸತ್ಯಪ್ಪ ಶಿವಳ್ಳಿ ಅವರು ಧಾರವಾಡ ಜಿಲ್ಲೆ ಕುಂದಗೋಳ ಕ್ಷೇತ್ರದಿಂದ ವಿಧಾನಸಭೆಗೆ ಆರಿಸಿ ಬಂದಿದ್ದರು. 58 ವರ್ಷದ ಶಿವಳ್ಳಿಬಿಎ ಪದವೀಧರ.1994ರಲ್ಲಿ ಕೆಸಿಪಿಯಿಂದ ಸ್ಪರ್ಧಿಸುವುದರ ಮೂಲಕ ರಾಜಕೀಯ ಪ್ರವೇಶಿಸಿದ್ದ ಶಿವಳ್ಳಿ ಮೊದಲ ಚುನಾವಣೆಯಲ್ಲಿ ಸೋಲಭವಿಸಿದ್ದರು. 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.2008ರಲ್ಲಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಸೋತರು. 2013, 2018ರ ಚುನಾವಣೆಯಲ್ಲಿ ಗೆಲುವು. ತಾಲ್ಲೂಕಿನ ರಾಜಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.