
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜೋರಾಗಿ ಮಳೆ ಸುರಿಯಿತ್ತಿದೆ.
ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ನಂತರ ಗುಡುಗು ಸಹಿತ ಗಾಳಿ ಮಳೆ ರಭಸದಿಂದ ಸುರಿಯಿತು. ಹಳೇಹುಬ್ಬಳ್ಳಿ, ಆನಂದನಗರದ ಕೆಲವು ತಗ್ಗು ಪ್ರದೇಶಗಳಲ್ಲಿ ಮತ್ತು ಬಿ.ಆರ್.ಟಿ.ಎಸ್. ರಸ್ತೆಯಲ್ಲಿ ನೀರು ನಿಂತಿತ್ತು. ಮಾರುಕಟ್ಟೆಗೆ ಬಂದವರು ಪರದಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.