ADVERTISEMENT

ಹೆಸ್ಕಾಂ: ದರ ಪರಿಷ್ಕರಣೆ, ಫೆ. 27ಕ್ಕೆ ಸಭೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 15:42 IST
Last Updated 21 ಫೆಬ್ರುವರಿ 2025, 15:42 IST

ಹುಬ್ಬಳ್ಳಿ: ಹೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ದರ ಪರಿಷ್ಕರಣೆ ಕುರಿತು ಸಾರ್ವಜನಿಕ ವಿಚಾರಣಾ ಸಭೆಯನ್ನು ಇಲ್ಲಿನ ನವನಗದ ಹೆಸ್ಕಾಂ ಕಚೇರಿಯ ಸಭಾಂಗಣದಲ್ಲಿ ಫೆ. 27ರಂದು ಬೆಳಿಗ್ಗೆ 10.30ಕ್ಕೆ ಕರೆಯಲಾಗಿದೆ.

2025 ರಿಂದ 2028ನೇ ಸಾಲಿನ ಆರ್ಥಿಕ ವರ್ಷದ ಅವಧಿಯ ದರ ಪರಿಷ್ಕರಣೆ ಕುರಿತು ಬೆಂಗಳೂರಿನ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗದಿಂದ ಬಂದ ಅರ್ಜಿ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆ ಕರೆಯಲಾಗಿದೆ. ವಿಚಾರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಸಲಹೆ ಸೂಚನೆಗಳನ್ನು ಲಿಖಿತ ರೂಪದಲ್ಲಿ ಅಥವಾ ಮೌಖಿಕವಾಗಿಯೂ ತಿಳಿಸಬಹುದು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT