ಹುಬ್ಬಳ್ಳಿ: ಹೆಸ್ಕಾಂ ವ್ಯಾಪ್ತಿಯಲ್ಲಿನ ಭೂಗತ ವಿದ್ಯುತ್ ಕೇಬಲ್ ದೋಷ ಪತ್ತೆಹಚ್ಚುವ ಅತ್ಯಾಧುನಿಕ ತಂತ್ರಜ್ಞಾನದ ನೂತನ ವಾಹನಕ್ಕೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್. ಅವರು ಮಂಗಳವಾರ ಚಾಲನೆ ನೀಡಿದರು.
ನಗರದ ತಬೀಬ್ ಲ್ಯಾಂಡ್‌ನಲ್ಲಿರುವ ಹೆಸ್ಕಾಂ ಕಚೇರಿ ಆವರಣದಲ್ಲಿ ನೂತನ ವಾಹನಕ್ಕೆ ಪೂಜೆ ಸಲ್ಲಿಸಿದರು. ಹುಬ್ಬಳ್ಳಿ ನಗರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಜಯಪ್ರದಾ ವಾಹನದ ವಿಶೇಷತೆ, ಕಾರ್ಯವಿಧಾನದ ಕುರಿತು ಮಾಹಿತಿ ನೀಡಿದರು. ಬಳಿಕ ಅಧಿಕಾರಿಗಳ ಸಭೆ ನಡೆಸಿದ ವೈಶಾಲಿ, ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವುದು ಹೆಸ್ಕಾಂ ಧ್ಯೇಯವಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಹೆಸ್ಕಾಂ ತಾಂತ್ರಿಕ ನಿರ್ದೇಶಕ ಜಗದೀಶ ಎಸ್., ಗ್ರಾಮೀಣ ವಿಭಾಗದ ಪ್ರಭಾರ ಕಾರ್ಯನಿರ್ವಾಹಕ ಎಂಜಿನೀಯರ್ ಕಿರಣಕುಮಾರ್, ತಾಂತ್ರಿಕ ಸಹಾಯಕ ಎಂ.ಬಿ. ಸುಣಗಾರ, ಯು.ಜಿ. ಕೇಬಲ್ ಎಇಇ ಮಮತಾ ಗುಡಿಮನಿ, ಜೆಇ ಎಂ.ಎಂ. ಭಜಂತ್ರಿ, ಶರತ ಹಾಗೂ ಹೆಸ್ಕಾಂ ಸಿಬ್ಬಂದಿ ಇದ್ದರು.
ವಾಹನದ ವಿಶೇಷತೆ: ವಾಹನ ಲಿನಿಕ್ಸ್ ಆಪರೇಟಿಂಗ್ ಸಾಫ್ಟ್‌ವೇರ್ ಹೊಂದಿದ್ದು, ಸಂಪೂರ್ಣ ಸುರಕ್ಷತೆಯಿಂದ ಕೂಡಿದೆ. ಹುಬ್ಬಳ್ಳಿ ನಗರ ವ್ಯಾಪ್ತಿಯಲ್ಲಿ 878 ಕಿ.ಮೀ.ನಷ್ಟು ಭೂಗತ ವಿದ್ಯುತ್ ಕೇಬಲ್ ಇದ್ದು, ಇದರ ಸಹಾಯದಿಂದ 10–15 ನಿಮಿಷಗಳಲ್ಲಿ ಕೇಬಲ್ ದೋಷ ನಿಖರವಾಗಿ ಪತ್ತೆ ಹಚ್ಚಬಹುದು. ಸಮಯ ಹಾಗೂ ಶ್ರಮ ಕೂಡ ಉಳಿತಾಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.