
ಪ್ರಜಾವಾಣಿ ವಾರ್ತೆ
ಧಾರವಾಡ: ಹಾವೇರಿ ನಗರಸಭೆಗೆ ಆಡಳಿತಾಧಿಕಾರಿ ನೇಮಕ ಮಾಡಿದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಧಾರವಾಡ ಪೀಠ ಗುರುವಾರ ತಡೆ ನೀಡಿದೆ.
ಆಡಳಿತಾಧಿಕಾರಿ ನೇಮಕಕ್ಕೆ ಮುಂದಾಗಿದ್ದ ಸರ್ಕಾರದ ನಡೆಯನ್ನು ಪ್ರಶ್ನಿಸಿ ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಹಾಗೂ ಇತರರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ಪೀಠ ಈ ಕುರಿತಂತೆ ಆದೇಶಿಸಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಕೆ.ಎಸ್.ಕೋರಿಶೆಟ್ಟರ್ ಈ ವಿಷಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.