ಬೆಂಗಳೂರು: ಅವಧಿ ಪೂರ್ಣಗೊಂಡಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.17ಕ್ಕೆ ಮುಂದೂಡಿದೆ.
ಈ ಕುರಿತು ಗುರುನಾಥ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಡಿ.17ಕ್ಕೆ ನಿಗದಿ ಪಡಿಸಿತು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರ ಅವಧಿ 2019ರ ಮಾ.6ಕ್ಕೆ ಪೂರ್ಣಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.