
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಚಿತ್ರ
ಧಾರವಾಡ: ‘ಮಾಳಮಡ್ಡಿ ಬಡಾವಣೆಯ ಹಿಂದೂ ಸಮ್ಮೇಳನ ಸಮಿತಿ ವತಿಯಿಂದ ಮಾರ್ಚ್ 1ರಂದು ಸಂಜೆ 5 ಗಂಟೆಗೆ ಮಾಳಮಡ್ಡಿ ಕೆ.ಇ. ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಹಿಂದೂ ಸಮ್ಮೇಳನ ನಡೆಯಲಿದೆ’ ಎಂದು ಸಮಿತಿ ಉಪಾಧ್ಯಕ್ಷ ರವಿ ದೇಶಪಾಂಡೆ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನುಗ್ಗಿಕೇರಿ ದ್ವಾರಪುರದ ಪರಮಾತ್ಮ ಅವರು ಸಾನ್ನಿಧ್ಯ ವಹಿಸುವರು. ಅಖಿಲ ಭಾರತೀಯ ಸಹ ಸಂಯೋಜಕ ರಘುನಂದನ ಅವರು ಮುಖ್ಯ ಭಾಷಣ ಮಾಡುವರು. ಮಧ್ಯಾಹ್ನ 3 ಗಂಟೆಗೆ ಶೋಭಾಯತ್ರೆ ನಡೆಯಲಿದೆ. ಕಲಾತಂಡಗಳು, ಭಜನಾ ಮಂಡಳಿಗಳು ಭಾಗವಹಿಸಲಿವೆ’ ಎಂದರು.
ಸಮಿತಿಯ ಅಧ್ಯಕ್ಷೆ ಡಾ. ಸೌಭಾಗ್ಯ ಕುಲಕರ್ಣಿ, ಕಾರ್ಯದರ್ಶಿ ವಿನಾಯಕ ಜೋಶಿ, ಬಸವರಾಜ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.