ADVERTISEMENT

ಜ. 27ಕ್ಕೆ ಅಮಿತ್ ಶಾ, 28ಕ್ಕೆ ಗಡ್ಕರಿ ಹುಬ್ಬಳ್ಳಿಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2023, 10:47 IST
Last Updated 18 ಜನವರಿ 2023, 10:47 IST
ಅಮಿತ್ ಶಾ
ಅಮಿತ್ ಶಾ   

ಹುಬ್ಬಳ್ಳಿ: ‘ಇಲ್ಲಿನ ವಿದ್ಯಾನಗರದ ಕೆಎಲ್‌ಇ ಸಂಸ್ಥೆಯ ಬಿ.ಬಿ. ಭೂಮರಡ್ಡಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಅಮೃತ ಮಹೋತ್ಸವ ಹಾಗೂ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ 75ನೇ ವರ್ಷದ ಜನ್ಮದಿನದ ಅಂಗವಾಗಿ ಜ. 27ರಿಂದ 29ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, 27ರಂದು ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ’ ಎಂದು ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ್ ಹೇಳಿದರು.

‘ಅಮೃತ ಮಹೋತ್ಸವದ ಅಂಗವಾಗಿ ಕಾಲೇಜಿನ ಆವರಣದಲ್ಲಿ ₹25 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗವನ್ನು ಅಮಿತ್ ಶಾ ಅವರು ಉದ್ಘಾಟಿಸಲಿದ್ದಾರೆ. 28ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಪಾಲ್ಗೊಳ್ಳಲಿದ್ದಾರೆ’ ಎಂದು ಕಾಲೇಜಿನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಜ. 29ರಂದು ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮವಿದ್ದು, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಹಾಗೂ ‘3 ಈಡಿಯಟ್ಸ್’ ಸಿನಿಮಾ ಖ್ಯಾತಿಯ ಎಂಜಿನಿಯರ್ ಸೋನಂ ವಾಂಗ್ಚುಕ್ ಭಾಗವಹಿಸಲಿದ್ದಾರೆ. ಅಮೃತ ಮಹೋತ್ಸವದ ಅಂಗವಾಗಿ ಮೂರು ದಿನ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.