ಹುಬ್ಬಳ್ಳಿ: ಕೋವಿಡ್‌ನಿಂದ ಮೃತಪಟ್ಟ ಮುಸ್ಲಿಂ ಸಮಾಜದ ಜನರ ಅಂತಿಮ ಸಂಸ್ಕಾರ ಕಾರ್ಯವನ್ನು ಗೌರವಯುತವಾಗಿ ನಡೆಸಿಕೊಂಡು ಬಂದಿರುವ ಜೈಲಾನಿ ಬ್ಯಾಡಗಿ ಅವರನ್ನು ಅಂಜುಮನ್ ಎ ಇಸ್ಲಾಂ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
ಹುಬ್ಬಳ್ಳಿಯಲ್ಲಿ ಏಪ್ರಿಲ್‌ನಲ್ಲಿ ಕೋವಿಡ್‌ನಿಂದ ಮುಸ್ಲಿಂ ಸಮಾಜದ ಮೊದಲ ವ್ಯಕ್ತಿ ಮೃತಪಟ್ಟಿದ್ದರು. ಆಗಿನಿಂದ ಇಲ್ಲಿಯವರೆಗೆ 120ಕ್ಕೂ ಹೆಚ್ಚು ಸಮಾಜದ ಜನ ಸೋಂಕಿಗೆ ಬಲಿಯಾಗಿದ್ದಾರೆ. ಪಿಪಿಇ ಕಿಟ್ ಧರಿಸಿ ಅವರ ಅಂತ್ಯಕ್ರಿಯೆಯನ್ನು ಜೈಲಾನಿ ನೆರವೇರಿಸಿದ್ದಾರೆ.
ಶಾಸಕ ಪ್ರಸಾದ ಅಬ್ಬಯ್ಯ, ಬ್ಯಾಡಗಿ ಅವರನ್ನು ಸನ್ಮಾನಿಸಿ ಅತ್ಯಂತ ಸಂಕಷ್ಟದ ಸಮಯದಲ್ಲಿಯೂ ಮಾಡಿದ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥೆ ಅಧ್ಯಕ್ಷ ಮಹಮ್ಮದ್ ಯೂಸುಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ನವಾಜ್ ಕಿತ್ತೂರು, ಕಾರ್ಯದರ್ಶಿ ಬಶೀರ ಹಳ್ಳೂರ, ಅಬ್ದುಲ್ ಮುನಾಫ್ ದೇವಗಿರಿ, ಸಂಸ್ಥೆಯ ಆಸ್ಪತ್ರೆ ಮಂಡಳಿ ಕಾರ್ಯದರ್ಶಿ ಎಂ.ಎ.ಪಠಾಣ, ಶಿಕ್ಷಣ ಸಂಸ್ಥೆ ಪದಾಧಿಕಾರಿಗಳಾದ ಇಮಾಮ ಹುಸೇನ್ ಮಡಕಿ, ಸಲೀಂ ಸುಂಡಕೆ, ಅಶಪಾಕ ಬಿಜಾಪುರ, ಅಬ್ದುಲ್ ರಜಾಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.