ADVERTISEMENT

ಹುಬ್ಬಳ್ಳಿ | ಕೊರೊನಾದಿಂದ ಗುಣಮುಖರಾದ ಪೊಲೀಸ್ ಕಾನ್‌ಸ್ಟೆಬಲ್‌ಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 8:47 IST
Last Updated 12 ಜುಲೈ 2020, 8:47 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಗುಣಮುಖವಾಗಿ ಕಿಮ್ಸ್ ಆಸ್ಪತ್ರೆಯಿಂದ ಭಾನುವಾರ ಬಿಡುಗಡೆಯಾದ ಇಲ್ಲಿನ ಉಪನಗರ ಠಾಣೆಯ ಪೊಲೀಸ್ ‌ಕಾನ್‌ಸ್ಟೆಬಲ್ ಅವರಿಗೆಠಾಣೆ ಸಿಬ್ಬಂದಿ ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು.

ತಮ್ಮ ಇಲಾಖೆಯ ಸಿಬ್ಬಂದಿಯನ್ನು ಸ್ವಾಗತಿಸಲು ಖುದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಬಂದಿದ್ದರು. ಚೇತರಿಸಿಕೊಂಡ ಪೊಲೀಸ್‌ಗೆ ಮೈಸೂರು ಪೇಟ, ಶಾಲು, ಹೂವಿನ ಮಾಲೆ ಹಾಕಿ ಸನ್ಮಾನಿಸಿದರು.

ಹುಬ್ಬಳ್ಳಿಯಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖವಾಗಿ ಹೊರಬಂದ ಮೊದಲ ಪೊಲೀಸ್ ಇವರಾಗಿದ್ದಾರೆ.

ADVERTISEMENT

ಕಳ್ಳತನದ ಆರೋಪದಲ್ಲಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬರಿಂದ ಈ ಪೊಲೀಸ್ ಗೆ ಸೋಂಕು ತಗುಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.