
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಹುಬ್ಬಳ್ಳಿ: ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣದ ಸಂಬಂಧ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಆರಕ್ಕೆ ಏರಿದೆ.
ಪ್ರಮುಖ ಆರೋಪಿಗಳಾದ ಗುರುಸಿದ್ದಗೌಡ ಪಾಟೀಲ, ಫಕ್ಕೀರಗೌಡ ಪಾಟೀಲ ಮತ್ತು ಬಸನಗೌಡ ಪಾಟೀಲ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ.
ಮಾನ್ಯಾ ಅವರ ಅಜ್ಜ ಗುರುಸಿದ್ದಗೌಡ ಪಾಟೀಲ ತಮ್ಮ ಸಹೋದರ ಫಕ್ಕೀರಗೌಡ ಮತ್ತು ಅವರ ಪುತ್ರ ಬಸವನಗೌಡ ಜತೆ ಸೇರಿ ಕೃತ್ಯಕ್ಕೆ ಸಂಚು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ದಿವ್ಯಾಪ್ರಭು ಮಂಗಳವಾರ ವಿವೇಕಾನಂದ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಮಾನ್ಯಾ ಅವರ ಪತಿ ವಿವೇಕಾನಂದ ಅವರಿಗೆ ₹5 ಲಕ್ಷ ಪರಿಹಾರದ ಚೆಕ್ ವಿತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.