ಹುಬ್ಬಳ್ಳಿ–ಧಾರವಾಡ ಮಹಾನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್
ಹುಬ್ಬಳ್ಳಿ: ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರಜ್ವಲ್‌ನನ್ನು ಬೆಂಡಿಗೇರಿ ಠಾಣೆಗೆ ಕರೆದುಕೊಂಡು ಬಂದ ಸಂದರ್ಭ, ಪೊಲೀಸರ ಕಣ್ಣುತಪ್ಪಿಸಿ ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ನಗರದ ಮಂಟೂರ ರಸ್ತೆಯಲ್ಲಿ 2025ರ ನ.13ರಂದು ಮಲ್ಲಿಕ್ ಜಾನ್ ಕೊಲೆಯಾಗಿದ್ದು, ಪ್ರಜ್ವಲ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು. ನಗರದ ಉಪ ಕಾರಾಗೃಹದಲ್ಲಿದ್ದಾಗ ಜೈಲು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿಕೊಂಡ ಕಾರಣ, ವಿಜಯಪುರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮತ್ತೊಂದು ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಫೆ.10ರಂದು ಬೆಂಡಿಗೇರಿ ಠಾಣೆಗೆ ಕರೆತಂದಿದ್ದಾಗ ಪರಾರಿಯಾಗಿದ್ದನು.
‘ಕೊಲೆ ಆರೋಪಿ ಪ್ರಜ್ವಲ್‌ನನ್ನು ವಿಚಾರಣೆಗೆ ಕರೆದುಕೊಂಡು ಬಂದ ಸಂದರ್ಭ ಸಿಬ್ಬಂದಿ ಕಣ್ಣು ತಪ್ಪಿಸಿ ಪರಾರಿಯಾಗಿದ್ಡಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಸುರಕ್ಷಿತವಾಗಿ ಕರೆತಂದು, ಪುನಃ ಕಾರಾಗೃಹಕ್ಕೆ ಬಿಡುವ ಜವಾಬ್ದಾರಿ ನಮ್ಮದಾಗಿರುತ್ತದೆ. ಸಿಬ್ಬಂದಿ ನಿರ್ಲಕ್ಷ್ಯದ ಕುರಿತು ವರದಿ ನೀಡುವಂತೆ ಠಾಣಾಧಿಕಾರಿಗೆ ಸೂಚಿಸಿದ್ದು, ಲೋಪ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.