ADVERTISEMENT

ಹುಬ್ಬಳ್ಳಿ| ಪಾಟೀಲ್‌ ಪುಟ್ಟಪ್ಪ ಆರೋಗ್ಯ ವಿಚಾರಿಸಿದ ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2020, 8:48 IST
Last Updated 15 ಮಾರ್ಚ್ 2020, 8:48 IST
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಯಲ್ಲಿ ಪಾಟೀಲ ಪುಟ್ಟಪ್ಪ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಸಂಸದೆ ಶೋಭಾ ಕರಂದ್ಲಾಜೆ
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಯಲ್ಲಿ ಪಾಟೀಲ ಪುಟ್ಟಪ್ಪ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಸಂಸದೆ ಶೋಭಾ ಕರಂದ್ಲಾಜೆ   

ಹುಬ್ಬಳ್ಳಿ: ಅನಾರೋಗ್ಯದಿಂದ ಇಲ್ಲಿನ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆರೋಗ್ಯ ವಿಚಾರಿಸಿದರು. ‌ಪಾಪು ಆರೋಗ್ಯದ ಬಗ್ಗೆ ವೈದ್ಯರು ಮತ್ತು ಕುಟುಂಬದವರಿಂದ ಮಾಹಿತಿ ಪಡೆದರು. ‌

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪು ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಆದಷ್ಟು ಬೇಗ ಗುಣಮುಖವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. 2017ರಲ್ಲಿ ಪಾಪು ಅವರಿಗೆ ರಾಷ್ಟ್ರೀಯ ಬಸವ ಪುರಸ್ಕಾರ ನೀಡಲಾಗಿತ್ತು. ಆದರೆ, ಅವರು ಇದುವರೆಗೂ ಪ್ರಶಸ್ತಿ ಸ್ವೀಕರಿಸಿರಲಿಲ್ಲ. ಪ್ರಶಸ್ತಿ ಮೊತ್ತ ₹ 10 ಲಕ್ಷವನ್ನು ಎರಡು ದಿನಗಳಲ್ಲಿ ಅವರಿಗೆ ತಲುಪಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಪಾಪು ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.‌ ಅವರನ್ನು ಗುಣಮುಖ ಮಾಡಲು ವೈದ್ಯರು ಶ್ರಮಿಸುತ್ತಿದ್ದಾರೆ ಎಂದರು.

ADVERTISEMENT

ಗೃಹಸಚಿವ ಬಸವರಾಜ ಬೊಮ್ಮಾಯಿ, ಸಚಿವ ಜಗದೀಶ ಶೆಟ್ಟರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.