
ಧಾರವಾಡ: ‘ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ, ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿ ಡಿ.27ರಂದು ಹುಬ್ಬಳ್ಳಿ ಚಲೋ ಪ್ರತಿಭಟನಾ ರ‍್ಯಾಲಿ ನಡೆಸಲಾಗುವುದು’ ಎಂದು ಮನಸೂರಿನ ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರು ತಿಳಿಸಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಿಗ್ಗೆ 10 ಗಂಟೆಗೆ ಚನ್ನಮ್ಮ ವೃತ್ತದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿವರೆಗೆ ರ‍್ಯಾಲಿ ನಡೆಸಿ ಮನವಿ ಸಲ್ಲಿಸಲಾಗುವುದು. ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಕನ್ನಡಿಗರ ಹೆಸರನ್ನು ನಾಮಕರಣ ಮಾಡಲು 2023ರ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾವವನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆದರೆ, ವಿಮಾನಯಾನ ಸಚಿವರು ಈವರೆಗೆ ಕ್ರಮವಹಿಸಿಲ್ಲ’ ಎಂದು ದೂರಿದರು.
ಮುಖಂಡ ಶಿವಾನಂದ ಮುತ್ತಣ್ಣವರ ಮಾತನಾಡಿ, ‘ವಿಮಾನ ನಿಲ್ದಾಣಗಳಿಗೆ ಹೆಸರು ನಾಮಕರಣ ನಿಟ್ಟಿನಲ್ಲಿ ಅಕ್ಟೋಬರ್‌ನಲ್ಲಿ ಸಚಿವ ಪ್ರಲ್ಹಾದ ಜೋಶಿ ಮೂಲಕ ವಿಮಾನಯಾನ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು. ಆದರೆ ಈವರೆಗೆ ಕ್ರಮ ವಹಿಸಿಲ್ಲ. ಪಕ್ಷಾತೀತವಾಗಿ ಹುಬ್ಬಳ್ಳಿ ಚಲೋ ಹಮ್ಮಿಕೊಂಡಿದ್ದೇವೆ’ ಎಂದರು.
ಪ್ರಕಾಶ, ರಮೇಶ, ನಿಂಗಪ್ಪ, ಭೀಮಣ್ಣ, ಮಂಜುನಾಥ, ಬಸವರಾಜ, ಅಣ್ಣಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.