
ಪ್ರಜಾವಾಣಿ ವಾರ್ತೆರೈಲು
– ಪ್ರಜಾವಾಣಿ ಚಿತ್ರ
ಹುಬ್ಬಳ್ಳಿ: ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಡಿಸೆಂಬರ್ 24ರಂದು ಎರಡು ಏಕಮುಖ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ನೈರುತ್ಯ ರೈಲ್ವೆ ನಿರ್ಧರಿಸಿದೆ.
ಎಸ್ಎಸ್ಎಸ್ ಹುಬ್ಬಳ್ಳಿ–ಯಶವಂತಪುರ ಏಕಮುಖ ವಿಶೇಷ ಎಕ್ಸ್‌ಪ್ರೆಸ್ ರೈಲು (07379) ಅಂದು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು, ರಾತ್ರಿ 8.30ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. ಹಾವೇರಿ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.
ಯಶವಂತಪುರ–ವಿಜಯಪುರ ಏಕಮುಖ ವಿಶೇಷ ಎಕ್ಸ್‌ಪ್ರೆಸ್ ರೈಲು (06277) ಅಂದು ರಾತ್ರಿ 9.50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 9 ಗಂಟೆಗೆ ವಿಜಯಪುರ ತಲುಪಲಿದೆ. ಬಾದಾಮಿ, ಬಾಗಲಕೋಟೆ, ಆಲಮಟ್ಟಿ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಎರಡೂ ರೈಲುಗಳು ಎಸಿ, ಸ್ಲೀಪರ್, ಸಾಮಾನ್ಯ ದ್ವಿತೀಯ ದರ್ಜೆ, ಲಗೇಜ್–ಕಂ–ಬ್ರೇಕ್ ವ್ಯಾನ್ ಮತ್ತು ಜನರೇಟರ್ ಕಾರ್ ಸೇರಿದಂತೆ ಒಟ್ಟು 16 ಬೋಗಿಗಳನ್ನು ಹೊಂದಿವೆ.