ADVERTISEMENT

ಹುಬ್ಬಳ್ಳಿ| ಅಧಿಕ ಲಾಭದ ಆಸೆ: ₹17.46 ಲಕ್ಷ ವಂಚನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2026, 4:17 IST
Last Updated 11 ಜನವರಿ 2026, 4:17 IST
<div class="paragraphs"><p>ಸೈಬರ್ ವಂಚನೆ</p></div>

ಸೈಬರ್ ವಂಚನೆ

   

ಹುಬ್ಬಳ್ಳಿ: ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ನಗರದ ದಿನೇಶ ಮೇತ್ರಾಣಿ ಅವರ ವಾಟ್ಸ್‌ಆ್ಯಪ್‌ ನಂಬರ್‌ಗೆ ಆ್ಯಪ್‌ ಲಿಂಕ್‌ ಕಳುಹಿಸಿದ ಮಹಿಳೆ, ಅವರಿಂದ ₹17.46 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ ಬಗ್ಗೆ ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆ: ಸ್ಟಾಕ್‌ ಇನ್‌ವೆಸ್ಟ್‌ಮೆಂಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ಧಾರವಾಡದ ಶ್ರೀಕಾಂತ ದರ್ಬಾರೆ ಅವರ ಮೊಬೈಲ್‌ಗೆ ಕರೆ ಮಾಡಿದ ವ್ಯಕ್ತಿ, ₹5 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಕುರಿತು ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.