ADVERTISEMENT

ಹುಬ್ಬಳ್ಳಿ | ಬೈಪಾಸ್‌ ಕಾಮಗಾರಿ ಏಪ್ರಿಲ್‌ನಲ್ಲಿ ಮುಕ್ತಾಯ: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 3:32 IST
Last Updated 27 ಆಗಸ್ಟ್ 2025, 3:32 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ‘ಹುಬ್ಬಳ್ಳಿ–ಧಾರವಾಡ ಬೈಪಾಸ್‌ ಕಾಮಗಾರಿ ಶೇ 70ರಷ್ಟು ಮುಕ್ತಾಯವಾಗಿದ್ದು, 2026ರ ಏಪ್ರಿಲ್‌ನಲ್ಲಿ ಪೂರ್ಣಗೊಳ್ಳಲಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬೈಪಾಸ್‌ ರಸ್ತೆಯ ಕೆಲವು ಕಡೆ ತಡೆಗೋಡೆ ನಿರ್ಮಾಣ ಹಾಗೂ ಒಳಚರಂಡಿ ಸಮಸ್ಯೆ ಎದುರಾಗಿದೆ. ಅವುಗಳನ್ನು ಸರಿಪಡಿಸಿ ಕಾಮಗಾರಿಗೆ ವೇಗ ನೀಡಲಾಗುತ್ತಿದೆ’ ಎಂದರು.

‘ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದಾಗಿ 80 ಸಾವಿರ ಟನ್‌ ಹೆಸರು ಬೆಳೆ ನಷ್ಟವಾಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಅದನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆಯಾದರೆ ವಿಮೆ ಪರಿಹಾರ ಕೊಡಿಸಲು ಯತ್ನಿಸಲಾಗುವುದು. ರಸ್ತೆ ದುರಸ್ತಿಗೆ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಪಕ್ಷಾತೀತವಾಗಿ ಒತ್ತಾಯಿಸಲಾಗಿದೆ’ ಎಂದು ಹೇಳಿದರು.

ADVERTISEMENT

‘ಸೋಲಾರ್ ಎನರ್ಜಿ ಅನುಷ್ಠಾನದಲ್ಲಿ ರಾಜ್ಯ ಉತ್ತಮ ಸಾಧನೆ ಮಾಡುತ್ತಿದ್ದು, 2030ರಲ್ಲಿ ತಲುಪಬೇಕಿದ್ದ ಗುರಿಯನ್ನು ಈಗಲೇ ತಲುಪಿದೆ. ಪಿಎಂ ಕುಸುಮ್ ಯೋಜನೆಗೂ ಪ್ರೋತ್ಸಾಹ ನೀಡಲಾಗುತ್ತಿದೆ. ವಿಂಡ್ ಪವರ್‌ನಲ್ಲಿಯೂ ಸಾಕಷ್ಟು ಅಭಿವೃದ್ಧಿ ಸಾಧಿಸಿದ್ದು, ಇನ್ನಷ್ಟು ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹8 ಸಾವಿರ ಕೋಟಿ ಮೊತ್ತದ ಕ್ರಿಯಾ ಯೋಜನೆ ಸಿದ್ಧಪಡಿಸುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.