ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ–ಧಾರವಾಡ ನಗರ ಸಾರಿಗೆ ವಿಭಾಗದಿಂದ ಅವಳಿ ನಗರಗಳ ನಡುವೆ ಪ್ರತಿ ದಿನ ಬೆಳಿಗ್ಗೆ ಹಾಗೂ ರಾತ್ರಿ ನಗರ ಸಾರಿಗೆ ಬಸ್‌ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಿ.ಆರ್.ಟಿ.ಎಸ್. ಚಿಗರಿ ಬಸ್‌ಗಳ ಕಾರ್ಯಾಚರಣೆ ಆರಂಭವಾಗುವುದಕ್ಕಿಂತ ಮುನ್ನ ಮುಂಜಾನೆ 5.15, 5.30, 5.40ಕ್ಕೆ ಹಾಗೂ ಚಿಗರಿ ಬಸ್‌ಗಳ ಕಾರ್ಯಾಚರಣೆ ಸ್ಥಗಿತವಾದ ನಂತರ ರಾತ್ರಿ 11.15 ಮತ್ತು 11.30ಕ್ಕೆ ನಗರ ಸಾರಿಗೆ ಬಸ್‌ಗಳ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಬಡಾವಣೆಗಳಿಗೆ ಬಸ್ ಸೌಲಭ್ಯ: ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಸಂಚರಿಸುವ ಬಸ್‌ಗಳು ಪ್ರಜಾನಗರ, ಲೋಹಿಯಾನಗರ, ಗೋಕುಲ, ರಾಧಾಕೃಷ್ಣನಗರ, ಗೋಪನಕೊಪ್ಪ, ಆನಂದನಗರ, ಲಿಂಗರಾಜನಗರ ಬಡಾವಣೆಯಲ್ಲೂ ಸಾಗಲಿವೆ.
ಹುಬ್ಬಳ್ಳಿ ರೈಲ್ವೆನಿಲ್ದಾಣದ ಬಿ.ಆರ್.ಟಿ.ಎಸ್. ಪಾಸ್ ಘಟಕದಲ್ಲಿ ಬೆಳಿಗ್ಗೆ ಉಂಟಾಗುವ ಜನದಟ್ಟಣೆ ನಿಭಾಯಿಸಲು ಹೆಚ್ಚುವರಿಯಾಗಿ ಇಬ್ಬರು ಪಾಸ್ ಆಪರೇಟರ್‌ಗಳನ್ನು ನಿಯೋಜಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.