
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಗರದಲ್ಲಿರುವ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಇಂದು ಚುನಾವಣೆ ನಡೆಯುತ್ತಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಬೆಳಿಗ್ಗೆ 10.30ರಿಂದ ನಾಮಪತ್ರಗಳ ಸಲ್ಲಿಕೆ ಆರಂಭವಾಗಿದೆ. ಮಧ್ಯಾಹ್ನ 12ರವರೆಗೆ ನಾಮಪತ್ರಗಳ ಪರಿಶೀಲನೆ ಹಾಗೂ ಉಮೇದುವಾರಿಕೆ ಹಿಂತೆಗೆದುಕೊಳ್ಳುವಿಕೆ ನಡೆಯಲಿದೆ. ಚುನಾವಣೆ ಬದಲು ಹೊಂದಾಣಿಕೆ ಮೂಲಕವೇ ಸದಸ್ಯರ ಆಯ್ಕೆ ನಡೆಯಲಿದ್ದು, ಮಧ್ಯಾಹ್ನ 2.15ರ ಹೊತ್ತಿಗೆ ಅಂತಿಮ ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.