ADVERTISEMENT

ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಮೇಲ್ಸೇತುವೆ ಕಾಮಗಾರಿ ಮುಗಿಯುವುದು ಯಾವಾಗ?

​ಪ್ರಜಾವಾಣಿ ವಾರ್ತೆ
Published 6 ಮೇ 2025, 9:07 IST
Last Updated 6 ಮೇ 2025, 9:07 IST

ವಾಣಿಜ್ಯ ನಗರಿ ಹುಬ್ಬಳ್ಳಿಯ ಕೇಂದ್ರ ಸ್ಥಾನ ಚನ್ನಮ್ಮ ಸರ್ಕಲ್‌. ಏಳು ರಸ್ತೆಗಳು ಬಂದು ಸೇರುವ ಈ ವೃತ್ತದಲ್ಲಿ ಸಂಚಾರ ದಟ್ಟಣೆ ಎನ್ನುವುದು ಸಾಮಾನ್ಯ ಸಮಸ್ಯೆ. ದಟ್ಟಣೆ ನಿಯಂತ್ರಿಸಲು ಈ ಸರ್ಕಲ್‌ ಅನ್ನು ಕೇಂದ್ರವಾಗಿಟ್ಟುಕೊಂಡು ನಿರ್ಮಿಸಲು ಉದ್ದೇಶಿಸಲಾಗಿರುವ 3.9 ಕಿ.ಮೀ. ಉದ್ದದ ಮೇಲ್ಸೇತುವೆಯ ಕಾಮಗಾರಿ ಈ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ. ₹349.49 ಕೋಟಿ ವೆಚ್ಚದ ಈ ಕಾಮಗಾರಿಗೆ ಕಾರ್ಯಾದೇಶ ನೀಡಿದ್ದು 2022ರ ಜೂನ್‌ನಲ್ಲಿ. ಅಂದುಕೊಂಡಂತೆ ಎಲ್ಲವೂ ಆಗಿದ್ದರೆ 2024ರ ಜೂನ್‌ಗೇ ಈ ಕಾಮಗಾರಿ ಮುಗಿಯಬೇಕಿತ್ತು. ಈಗ, ತ್ವರಿತ ಕಾಮಗಾರಿಗಾಗಿ ಮತ್ತೆ ನಾಲ್ಕು ತಿಂಗಳು ಗಡುವು ನೀಡಲಾಗಿದ್ದು, ಚನ್ನಮ್ಮ ವೃತ್ತದ ಬಳಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.