ಬಂಧನ
(ಪ್ರಾತಿನಿಧಿಕ ಚಿತ್ರ)
ಹುಬ್ಬಳ್ಳಿ: ನಗರದ ಗುಡ್‌ಶೆಡ್ ರಸ್ತೆಯ ಮುತ್ತುಮಾರೆಮ್ಮ ದೇವಸ್ಥಾನದ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಹಳೇಹುಬ್ಬಳ್ಳಿಯ ನಾಗರಾಜ ಬದ್ದಿಯನ್ನು ಬಂಧಿಸಿರುವ ಶಹರ ಠಾಣೆ ಪೊಲೀಸರು, 2ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಆರೋಪಿ ನಾಗರಾಜ ಒಡಿಶಾದಿಂದ ಗಾಂಜಾ ತಂದು, ಗೋವಾಕ್ಕೆ ಮಾರಾಟ ಮಾಡಲು ಒಯ್ಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರು. ಇದೊಂದು ಸಂಘಟಿತ ಅಪರಾಧವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಒಡಿಶಾ ಹಾಗೂ ಗೋವಾ ರಾಜ್ಯದಲ್ಲಿರುವ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ನಾಗರಾಜ ವಿರುದ್ಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ದಾಖಲಾಗಿದೆ. ಅಲ್ಲದೆ, ಹಾವೇರಿ ಶಹರ ಠಾಣೆ, ಮುಂಡಗೋಡ ಠಾಣೆ ಮತ್ತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲೂ ಮದ್ಯ ಸಾಗಾಟ ಮತ್ತು ಮಾರಾಟದ ಕುರಿತು ದೂರು ದಾಖಲಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.