ADVERTISEMENT

ಹುಬ್ಬಳ್ಳಿ | ಬೆಂಕಿ ಅವಘಡ; ಗೃಹ ಬಳಕೆ ವಸ್ತುಗಳು ಭಸ್ಮ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 2:15 IST
Last Updated 29 ಜುಲೈ 2025, 2:15 IST
<div class="paragraphs"><p>ಬೆಂಕಿ ಅವಘಡ</p></div>

ಬೆಂಕಿ ಅವಘಡ

   

(ಸಾಂಕೇತಿಕ ಚಿತ್ರ)

ಹುಬ್ಬಳ್ಳಿ: ಇಲ್ಲಿಯ ನ್ಯೂ ಕಾಟನ್‌ ಮಾರ್ಕೆಟ್‌ನಲ್ಲಿರುವ ಕಲಬುರಗಿ ಕಾಂಪ್ಲೆಕ್ಸ್‌ನ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು, ₹10 ಸಾವಿರ ಮೌಲ್ಯದ ಗೃಹ ಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ.

ADVERTISEMENT

ಬೆಂಕಿ ಕಾಣಿಸಿಕೊಂಡ ತಕ್ಷಣ ಭದ್ರತಾ ಸಿಬ್ಬಂದಿ ಪೊಲೀಸರು ಹಾಗೂ ಆಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಸ್ಥಳಿಯರ ಸಹಕಾರದಿಂದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟೊ ಜಖಂ: ನಗರದ ನ್ಯೂ ಇಂಗ್ಲಿಷ್‌ ಸ್ಕೂಲ್‌ ಬಳಿ ಸೋಮವಾರ ಮರ ಹಾಗೂ ವಿದ್ಯುತ್ ಕಂಬ ಉರುಳಿದ್ದು, ಮೂರು ಆಟೊಗಳು ಸಂಪೂರ್ಣ ಜಖಂಗೊಂಡಿವೆ. ಏಕಾಏಕಿ ಮರ ಉರುಳಿ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ಸ್ಥಳೀಯರು ಆತಂಕಗೊಂಡಿದ್ದರು. ಹೆಸ್ಕಾಂ, ಅರಣ್ಯ ಇಲಾಖೆ ಸಿಬ್ಬಂದಿ ವಿದ್ಯುತ್ ಕಂಬ ಹಾಗೂ ಮರ ತೆರವುಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.