ADVERTISEMENT

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ; ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 12:50 IST
Last Updated 24 ಡಿಸೆಂಬರ್ 2025, 12:50 IST
<div class="paragraphs"><p>ಅಮಾನತು</p></div>

ಅಮಾನತು

   

ಹುಬ್ಬಳ್ಳಿ: ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮೀಣ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಬುಧವಾರ ಅಮಾನತು ಮಾಡಲಾಗಿದೆ.

ಠಾಣೆಯ ವಿಶೇಷ ವಿಭಾಗದ ಕಾನ್‌ಸ್ಟೆಬಲ್ ಸಂಗಮೇಶ ಸಾಗರ ಮತ್ತು ಬೀಟ್ ಕಾನ್‌ಸ್ಟೆಬಲ್‌ ಚಂದ್ರಕಾಂತ ರಾಥೋಡ ಅಮಾನತಾಗಿದ್ದಾರೆ. ಕೃತ್ಯದ ಕುರಿತು ಸರಿಯಾದ ಮಾಹಿತಿ ನೀಡದ ಕಾರಣ ಇಲಾಖೆಯ ಆಂತರಿಕ ತನಿಖೆ ಕಾಯ್ದಿರಿಸಿ, ಮುಂದಿನ ಅದೇಶದವರೆಗೆ ಅಮಾನತು ಮಾಡಿ ಆದೇಶಿಸಿರುವುದಾಗಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಂಗಳವಾರ ತಡರಾತ್ರಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಸಪ್ಪ ಸೋಲಾರಾಗೊಪ್ಪ ಮತ್ತು ಅನಿಲಗೌಡ ಪಾಟೀಲ ಬಂಧಿತರು. ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.