ADVERTISEMENT

ಕರ್ತವ್ಯಲೋಪ ಆರೋಪ: ವಿದ್ಯಾರ್ಥಿ ನಿಲಯ ಪಾಲಕಿ ಅಮಾನತು

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 4:42 IST
Last Updated 19 ಡಿಸೆಂಬರ್ 2025, 4:42 IST
<div class="paragraphs"><p>ಅಮಾನತು</p></div>

ಅಮಾನತು

   

ಹುಬ್ಬಳ್ಳಿ: ಕರ್ತವ್ಯಲೋಪ ಆರೋಪದ ಮೇಲೆ ಇಲ್ಲಿನ ರಾಜನಗರದ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದ ನಿಲಯ ಪಾಲಕಿಯನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.

ಶೋಭಾ ಚಾಕಲಬ್ಬಿ ಅಮಾನತುಗೊಂಡವರು. ವಿದ್ಯಾರ್ಥಿನಿಲಯದಲ್ಲಿನ ಅವ್ಯವಸ್ಥೆ ಬಗೆಗಿನ ವರದಿ ಆಧರಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಖುದ್ದು ಪರಿಶೀಲನೆ ನಡೆಸಿದ್ದಾರೆ. ಅವರ ವರದಿ ಆಧರಿಸಿ ಇಲಾಖಾ ವಿಚಾರಣೆ ಕಾಯ್ದಿರಿಸಿ, ಅಮಾನತಿನಲ್ಲಿ ಇರಿಸಲಾಗಿದೆ. ಮೇಲಧಿಕಾರಿಗಳ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಸೂಚಿಸಿದ್ದಾರೆ.

ADVERTISEMENT

ನಿಲಯದ ಕಾರ್ಯ ಪ್ರಭಾರವನ್ನು ಬೇರೆಯವರಿಗೆ ವಹಿಸುವಂತೆ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.