
ಹುಬ್ಬಳ್ಳಿ: ‘ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದರೂ, ಸಿದ್ದರಾಮಯ್ಯ ಅವರು ಬಿಟ್ಟುಕೊಡುವುದಿಲ್ಲ. ಅವರು ಯಾರ ಸೂಚನೆಗೂ ತಲೆಬಾಗುವುದಿಲ್ಲ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಡಿ.ಕೆ. ಶಿವಕುಮಾರ್ ಅವರು ಸಹ ಹಠ ಬಿಡುತ್ತಿಲ್ಲ. ಇಬ್ಬರ ಗುದ್ದಾಟದಲ್ಲಿ ಸರ್ಕಾರ ಪತನವಾಗಲಿದೆ’ ಎಂದರು.
‘ಎಚ್.ಡಿ.ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳಲು ಸಿದ್ದರಾಮಯ್ಯ ಕಾರಣ’ ಎಂಬ ಎಚ್.ಡಿ. ದೇವೇಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ದೇವೇಗೌಡರಿಗೆ ರಾಜಕೀಯವಾಗಿ ಸಾಕಷ್ಟು ಅನುಭವ ಇದೆ. ಸಿದ್ದರಾಮಯ್ಯ ಅವರು ಜೆಡಿಎಸ್‌ನಲ್ಲಿ ಇದ್ದಾಗ, ಅವರ ಎಲ್ಲ ಗುಣಗಳನ್ನು ನೋಡಿದ್ದಾರೆ. ಅವರು ಸಾಕಷ್ಟು ನಾಯಕರನ್ನು ಬೆಳೆಸಿದ್ದಾರೆ. ಅವರ ಹೇಳಿಕೆಯಲ್ಲಿ ಸತ್ಯಾಂಶ ಇದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.