
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಹುಬ್ಬಳ್ಳಿ: ಸಾಲಗಾರರ ಕಿರುಕುಳದಿಂದ ವ್ಯಕ್ತಿಯೊಬ್ಬರು ಮನನೊಂದು ಇಲ್ಲಿನ ಮುರಾರ್ಜಿ ನಗರದಲ್ಲಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ದಾಂಡೇಲಿ ಮೂಲದ, ಇಲ್ಲಿನ ಮುರಾರ್ಜಿನಗರದ ನಿವಾಸಿ ಸುನೀಲ ಚಾಂದಗುಡಿ (43) ಮೃತರು.
‘ಚಿಪ್ಸ್ ಡಿಸ್ಟ್ರಿಬ್ಯುಷನ್ ಏಜೆನ್ಸಿ ನಡೆಸುತ್ತಿದ್ದ ಸುನೀಲ, ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದರು. ಮಾವನ ಮನೆಯಲ್ಲಿ ಉಳಿದುಕೊಂಡಿದ್ದ ಅವರಿಂದ ಸಾಲ ವಸೂಲಿಗಾಗಿ ಸಾಲಗಾರರು ಪ್ರತಿದಿನ ಮನೆಗೆ ಬರುತ್ತಿದ್ದರಿಂದ ನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.