ADVERTISEMENT

ನೇಹಾ ಕೊಲೆ: ಎನ್‌ಎಸ್‌ಯುಐ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2024, 6:15 IST
Last Updated 24 ಏಪ್ರಿಲ್ 2024, 6:15 IST
<div class="paragraphs"><p>ಎನ್‌ಎಸ್‌ಯುಐ ಪ್ರತಿಭಟನೆ</p></div>

ಎನ್‌ಎಸ್‌ಯುಐ ಪ್ರತಿಭಟನೆ

   

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳು ಬುಧವಾರ ನಗರದ ಬಿವಿಬಿ ಕಾಲೇಜು ಎದುರು ಪ್ರತಿಭಟನೆ ನಡೆಸಿದರು.

ಬಿಆರ್‌ಟಿಎಸ್ ಕಾರಿಡಾರಿನಲ್ಲಿ ಚಿಗರಿ ಬಸ್‌ಗಳ ಸಂಚಾರ ಹಾಗೂ ಹುಬ್ಬಳ್ಳಿ-ಧಾರವಾಡ ನಡುವಿನ ವಾಹನಗಳ‌ ಸಂಚಾರ ಸ್ಥಗಿತಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಎನ್‌ಎಸ್‌ಯುಐ ಬಾವಟ ಹಾಗೂ ನೇಹಾ ಸಾವಿಗೆ ನ್ಯಾಯ ಬೇಕು ಎನ್ನುವ ಫಲಕ ಪ್ರದರ್ಶಿಸಿ, ಘೋಷಣೆ ಕೂಗಿದರು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲೇಬೇಕು ಎಂದು ಒತ್ತಾಯಿಸಿದರು.

ಡಿಸಿಪಿ ರಾಜೀವ್ ಎಂ. ಅವರಿಗೆ ಮನವಿ ಪತ್ರ ಸಲ್ಲಿಸಿ, ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ರೋಹಿತ್ ಘೋಡಕೆ, ರಫೀಕ್ ಅಲಿ, ರೋಹನ್ ಹಿಪ್ಪರಗಿ, ವಿನಯ ಪಟ್ಟಣಶೆಟ್ಟಿ, ರಾಹುಲ್ ಬೆಳದಡಿ, ಬಸನಗೌಡ ಪಾಟೀಲ, ವಿಶಾಲ ಮಾನೆ, ಕಿರಣ ಗಾಂಧಾಳ, ಕಲ್ಮೇಶ ಉಳ್ಳಾಗಡ್ಡಿ, ನಿಖಿಲ್ ಹಿರೇಮಠ, ಕಿಶೋರ ಸಿರಸಂಗಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.