ADVERTISEMENT

ಹುಬ್ಬಳ್ಳಿ | ಪ್ಯಾಲೆಸ್ತೀನ್‌ ಧ್ವಜ ಹಿಡಿದವರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2025, 3:03 IST
Last Updated 8 ಸೆಪ್ಟೆಂಬರ್ 2025, 3:03 IST
   

ಹುಬ್ಬಳ್ಳಿ: ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಧ್ವಜ ಹಿಡಿದು ಸಂಚರಿಸುತ್ತಿದ್ದ ನಾಲ್ವರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ನಿವಾಸಿಗಳಾದ ಮುಬಾರಕ್‌ ಮಾಮಾಜಿ, ಅಮನ್‌ ಕಬ್ಬೇನೂರ, ಸಮೀರ್‌ ನರೇಗಲ್‌ ಮತ್ತು ಜಾಕೀರ್‌ ಗುಂಟವಾಲೆ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ, ಗುಂಪು ಘರ್ಷಣೆ ಸೃಷ್ಟಿಸುವ ದುರುದ್ದೇಶದಿಂದ ಆರೋಪಿಗಳು ದೇವಾಂಗಪೇಟೆ ಬಳಿ ಕಾರಿನಲ್ಲಿ ಸಂಚರಿಸುವಾಗ ಪ್ಯಾಲೆಸ್ತೀನ್‌ ಧ್ವಜ ಹಾರಿಸುತ್ತ ಧಾರ್ಮಿಕ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT