ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನಲ್ಲಿ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಯಮನೂರ ಗ್ರಾಮದ ನಿವಾಸಿ ಫಕ್ಕಿರಪ್ಪ ಮಲ್ಲಪ್ಪ ಬಣಗಾರ (45) ಸೋಮವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.
ನವಲಗುಂದದ ಸಿದ್ದಾಪುರ ಓಣಿಯ ನಿವಾಸಿ ಮುತ್ತಪ್ಪ ಶಂಕರಪ್ಪ ಪೂಜಾರ (44) ಮಂಗಳವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ.
ಗದಗ ವರದಿ: ಗದಗ ತಾಲ್ಲೂಕಿನಲ್ಲಿ ಜೂನ್‌ನಲ್ಲಿ ಐವರು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಅವರಲ್ಲಿ ಮೂವರು 35 ರಿಂದ 40 ವರ್ಷದೊಳಗಿನವರು’ ಎಂದು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ ತಿಳಿಸಿದ್ದಾರೆ.
‘ಜಿಲ್ಲಾ ಆಸ್ಪತ್ರೆಯಲ್ಲಿ ಈ ವರ್ಷ ಜೂನ್‌ವರೆಗೆ 34 ಮಂದಿ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಈ ಪೈಕಿ ಆರು ಮಂದಿ 50 ವರ್ಷದೊಳಗಿನವರು’ ಎಂದು ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.