ADVERTISEMENT

ಹುಬ್ಬಳ್ಳಿ: ವೀರಶೈವ ಲಿಂಗಾಯತ ಏಕತಾ ಸಮಾವೇಶ- ಅದ್ದೂರಿ‌ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 12:48 IST
Last Updated 19 ಸೆಪ್ಟೆಂಬರ್ 2025, 12:48 IST
<div class="paragraphs"><p>ಹುಬ್ಬಳ್ಳಿ: ವೀರಶೈವ ಲಿಂಗಾಯತ ಏಕತಾ ಸಮಾವೇಶ- ಅದ್ದೂರಿ‌ ಮೆರವಣಿಗೆ</p></div>

ಹುಬ್ಬಳ್ಳಿ: ವೀರಶೈವ ಲಿಂಗಾಯತ ಏಕತಾ ಸಮಾವೇಶ- ಅದ್ದೂರಿ‌ ಮೆರವಣಿಗೆ

   

ಹುಬ್ಬಳ್ಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ನಗರದಲ್ಲಿ ಶುಕ್ರವಾರ ಆಯೋಜಿಸಿರುವ ವೀರಶೈವ ಲಿಂಗಾಯತ ಏಕತಾ ಸಮಾವೇಶದ ಅಂಗವಾಗಿ ವಿವಿಧ ಮಠಾಧೀಶರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

ಮೂರುಸಾವಿರ ಮಠದಿಂದ ಆರಂಭವಾದ ಮೆರವಣಿಗೆ ಕೊಪ್ಪಿಕರ್ ರಸ್ತೆ, ಸರ್. ಸಿದ್ದಪ್ಪ ಕಂಬಳಿ ರಸ್ತೆ ಮಾರ್ಗವಾಗಿ ನೆಹರೂ ಕ್ರೀಡಾಂಗಣದಲ್ಲಿನ ಹಾನಗಲ್ಲ ಶ್ರೀ ಕುಮಾರೇಶ್ವರ ಮಹಾಮಂಟಪದವರೆಗೆ ನಡೆಯಿತು. ನಂದಿಕೋಲು ಕುಣಿತ, ಕಹಳೆ, ಜಯಘೋಷ ಮೆರುಗು ನೀಡಿತು.

ADVERTISEMENT

ಮೈದಾನಕ್ಕೆ ಮೆರವಣಿಗೆಯಲ್ಲಿ ಬಂದ ಸ್ವಾಮೀಜಿಗಳನ್ನು ಪುಷ್ಪವೃಷ್ಟಿಗರೆದು ಸ್ವಾಗತಿಸಲಾಯಿತು. ಉರಿ ಬಿಸಿಲಲ್ಲೂ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಇದಕ್ಕೂ ಮುನ್ನ, ನಗರದ ಬಿವಿಬಿ ಕಾಲೇಜಿನಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಈಶ್ವರ ಖಂಡ್ರೆ, ಸಂಸದ ಜಗದೀಶ ಶೆಟ್ಟರ್ ಸೇರಿದಂತೆ ಸಮಾಜದ ಹಲವು ಮುಖಂಡರು ಸಭೆ ನಡೆಸಿ, ಸಮಾವೇಶದಲ್ಲಿ ಕೈಗೊಳ್ಳಬೇಕಾದ ನಿರ್ಣಯಗಳ ಕುರಿತು ಚರ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.