
ಹುಬ್ಬಳ್ಳಿ: 'ನಗರದ ಕೇಶ್ವಾಪುರದ ಚಾಲುಕ್ಯ ನಗರದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯನ್ನು ವಶಕ್ಕೆ ಪಡೆಯಲು ಹೋದಾಗ, ಅವರೇ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದೂ ಅಲ್ಲದೆ, ತಾವೇ ವಿವಸ್ತ್ರಗೊಂಡು ಗಲಾಟೆ ಮಾಡಿದ್ದಾರೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಮಹಿಳೆ ತಾನೇ ವಿವಸ್ತ್ರಗೊಂಡಿರುವ ವಿಡಿಯೊಗಳು ಇವೆ. ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೂ ಅವರು ಹಲ್ಲೆ ನಡೆಸಿರುವ ಸಾಕ್ಷಿಗಳು ಇವೆ. ಇದರಲ್ಲಿ ಪೊಲೀಸ್ ಇಲಾಖೆಯ ಯಾವ ತಪ್ಪೂ ಇಲ್ಲ' ಎಂದರು.
'ಮಹಿಳೆಯನ್ನು ವಶಕ್ಕೆ ಪಡೆಯಲು ಹೋದಾಗ ಸೆರೆಯಾದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೆಯಾಗಿದ್ದು, ಅದನ್ನು ನೋಡಿದಾಗ ಯಾರಿಗಾದರೂ ಮಹಿಳೆ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದೆನಿಸುತ್ತದೆ. ಆದರೆ, ವಿಷಯದ ಸತ್ಯಾಸತ್ಯತೆ ಮರೆಮಾಚಿ, ಪೊಲೀಸರ ಮೇಲೆ ಆರೋಪಿಸಲಾಗುತ್ತದೆ. ಮಾಧ್ಯಮಗಳು ಮತ್ತು ಸಾರ್ವಜನಿಕರು ವಾಸ್ತವ ಅರಿತುಕೊಳ್ಳಬೇಕು' ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.