
ಪ್ರಕರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು
–ಪ್ರಜಾವಾಣಿ ಚಿತ್ರ
ಹುಬ್ಬಳ್ಳಿ: ಇಲ್ಲಿನ ಚಾಲುಕ್ಯ ನಗರದಲ್ಲಿ ಇತ್ತೀಚಿಗೆ ನಡೆದ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಶುಕ್ರವಾರ ಸುಜಾತಾ ಹಂಡಿ ಅವರ ಕುಟುಂಬದ ಸದಸ್ಯರನ್ನು ವಿಚಾರಣೆ ನಡೆಸಿದರು.
ನಗರದ ಪ್ರವಾಸಿ ಮಂದಿರಲ್ಲಿ ತಾತ್ಕಾಲಿಕ ಕಚೇರಿ ಮಾಡಿಕೊಂಡಿರುವ ಅಧಿಕಾರಿಗಳು, ಎರಡು ತಂಡಗಳಾಗಿ ತನಿಖೆ ಮುಂದುವರಿಸಿದ್ದಾರೆ. ಎರಡು ದಿನಗಳ ಹಿಂದೆಯೇ ಸುಜಾತಾ ಕುಟುಂಬದವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಸುಜಾತಾ ಅವರ ತಾಯಿ ಕಮಲವ್ವ ಹಾಗೂ ಸಹೋದರಿ, ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಕೇಶ್ವಾಪುರ ಠಾಣೆಯ ಸಿಬ್ಬಂದಿಯನ್ನು ಮತ್ತೊಮ್ಮೆ ವಿಚಾರಣೆ ನಡೆಸಿರುವ ಸಿಐಡಿ ಅಧಿಕಾರಿಗಳು, ಪ್ರಕರಣದ ಕುರಿತಾಗಿ ಎಲ್ಲ ಮಾಹಿತಿಯನ್ನು ಸಂಗ್ರಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.