ADVERTISEMENT

ಉಪರಾಷ್ಟ್ರಪತಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2021, 11:22 IST
Last Updated 20 ಆಗಸ್ಟ್ 2021, 11:22 IST
ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರಿಗೆ ಪ್ರಲ್ಹಾದ ಜೋಶಿ  ಹಾಗೂ ಶಾಸಕ ಜಗದೀಶ ಶೆಟ್ಟರ್ ಅವರು ಶಾಲು ಹಾಕಿ ಸ್ವಾಗತ
ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರಿಗೆ ಪ್ರಲ್ಹಾದ ಜೋಶಿ  ಹಾಗೂ ಶಾಸಕ ಜಗದೀಶ ಶೆಟ್ಟರ್ ಅವರು ಶಾಲು ಹಾಕಿ ಸ್ವಾಗತ   

ಹುಬ್ಬಳ್ಳಿ: ವಿಜಯನಗರ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಕೈಗೊಂಡಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಪತ್ನಿ ಎಂ.ಉಷಾ ಅವರೊಂದಿಗೆ ಶುಕ್ರವಾರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಬಂದರು.

ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಶಾಸಕ ಜಗದೀಶ ಶೆಟ್ಟರ್ ಅವರು ಶಾಲು ಹಾಕಿ ಸ್ವಾಗತಿಸಿದರು.

ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಪುಸ್ತಕಗಳನ್ನು ನೀಡಿ ಬರಮಾಡಿಕೊಂಡರು..

ADVERTISEMENT

ಭಾರತೀಯ ವಾಯುಸೇನೆಯ ವಿಶೇಷ ಹೆಲಿಕಾಪ್ಟರ್ ಮೂಲಕ ಹೊಸಪೇಟೆಗೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.