ADVERTISEMENT

ನುಗ್ಗಿಕೇರಿ ಪ್ರಕರಣ ಮತ್ತೆಲ್ಲಿಯೂ ನಡೆಯದಿರಲಿ: ಮನವಿ ಸಲ್ಲಿಸಿದ ಮುಖಂಡರು

ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಮನವಿ ಸಲ್ಲಿಸಿದ ಮುಖಂಡರು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 2:38 IST
Last Updated 12 ಏಪ್ರಿಲ್ 2022, 2:38 IST
ಹುಬ್ಬಳ್ಳಿಯಲ್ಲಿ ನವನಗರದ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಸೋಮವಾರ ಹುಬ್ಬಳ್ಳಿ ಅಂಜುಮನ್‌ ಸಂಸ್ಥೆ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್‌ ಮುಖಂಡರು ಕಮಿಷನರ್‌ ಲಾಭೂರಾಮ್‌ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್ ಅವರಿಗೆ ಮನವಿ ಸಲ್ಲಿಸಿದರು
ಹುಬ್ಬಳ್ಳಿಯಲ್ಲಿ ನವನಗರದ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಸೋಮವಾರ ಹುಬ್ಬಳ್ಳಿ ಅಂಜುಮನ್‌ ಸಂಸ್ಥೆ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್‌ ಮುಖಂಡರು ಕಮಿಷನರ್‌ ಲಾಭೂರಾಮ್‌ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್ ಅವರಿಗೆ ಮನವಿ ಸಲ್ಲಿಸಿದರು   

ಹುಬ್ಬಳ್ಳಿ: ‘ಧಾರವಾಡದ ನುಗ್ಗಿಕೇರಿಯಲ್ಲಿ ನಡೆದ ಪ್ರಕರಣ ಮತ್ತೆಲ್ಲಿಯೂ ನಡೆಯದಂತೆ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಹುಬ್ಬಳ್ಳಿ ಅಂಜುಮನ್‌ ಸಂಸ್ಥೆಯ ಅಧ್ಯಕ್ಷ ಯೂಸೂಫ್‌ ಸವಣೂರ ಹೇಳಿದರು.

ನವನಗರದ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಸೋಮವಾರ ಮನವಿ ನೀಡಿದ ಮುಖಂಡರು, ‘ಅವಳಿ ನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ಎಲ್ಲ ಧರ್ಮದವರು ಪ್ರೀತಿ–ವಿಶ್ವಾಸದಿಂದ ಬಾಳುತ್ತಿದ್ದಾರೆ. ಹಿಂದೂ–ಮುಸ್ಲಿಮರು ಭಾವೈಕ್ಯದಡಿಯಲ್ಲಿ ಪರಸ್ಪರ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಂತಿ ಕಾಪಾಡಿಕೊಂಡು ಬಂದಿದ್ದಾರೆ. ಆದರೆ, ಕೆಲವರು ಉದ್ದೇಶಪೂರ್ವಕವಾಗಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ. ನುಗ್ಗಿಕೇರಿಯಲ್ಲಿ ನಡೆದ ಪ್ರಕರಣ ಹಿಂದೆ ಯಾರಿದ್ದಾರೆ ಎಂದು ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

ಕಮಿಷನರ್‌ ಲಾಭೂರಾಮ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್ ಅವರಿಗೆ ‘ನುಗ್ಗಿಕೇರಿ ಹನುಮಾನ ದೇವಸ್ಥಾನದ ಆವರಣದಲ್ಲಿ ನಬೀಸಾಬ್‌ ಅವರಿಗೆ ಸೇರಿದ ಕಲ್ಲಂಗಡಿ ಹಣ್ಣುಗಳನ್ನು ಕೆಲವರು ನಾಶಪಡಿಸಿ ನಷ್ಟವುಂಟು ಮಾಡಿದ್ದಾರೆ. ಅದನ್ನು ಅವರಿಂದಲೇ ವಸೂಲು ಮಾಡಬೇಕು. ಕಠಿಣ ಶಿಕ್ಷೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಶಾಸಕ ಪ್ರಸಾದ ಅಬ್ಬಯ್ಯ, ಮುಖಂಡರಾದ ಎ.ಎಂ. ಹಿಂಡಸಗೇರಿ, ವೀರಣ್ಣ ಮತ್ತಿಕಟ್ಟಿ, ಅಲ್ತಾಫ್ ಹಳ್ಳೂರ, ಅನಿಲಕುಮಾರ ಪಾಟೀಲ, ಅಲ್ತಾಫ್‌ ಕಿತ್ತೂರ, ರಾಜಶೇಖರ ಮೆಣಸಿನಕಾಯಿ, ಬಾಬಾಜಾನ ಮುಧೋಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.