ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲುಗಳ (07339–07340) ಸಂಚಾರ ಅವಧಿ ವಿಸ್ತರಣೆ ಹಾಗೂ ಮಹಾದೇವಪ್ಪ ಮೈಲಾರ ಹಾವೇರಿ ಮತ್ತು ರಾಣಿಬೆನ್ನೂರು ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆಗೆ ನೈರುತ್ಯ ರೈಲ್ವೆ ನಿರ್ಧರಿಸಿದೆ.
ಹುಬ್ಬಳ್ಳಿ-ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲು (07339) ಸೇವೆ ಮಾರ್ಚ್ 1ರಿಂದ ಜೂನ್ 30ರ ವರೆಗೆ, ಬೆಂಗಳೂರು ಹುಬ್ಬಳ್ಳಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲು (07340) ಸೇವೆಯನ್ನು ಮಾರ್ಚ್ 2ರಿಂದ ಜುಲೈ 1ರ ವರೆಗೆ ಸಂಚಾರ ಅವಧಿ ವಿಸ್ತರಿಸಲಾಗುತ್ತಿದ್ದು, ಎಸ್.ಎಂ.ಎಂ ಹಾವೇರಿ ಮತ್ತು ರಾಣಿಬೆನ್ನೂರು ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.