ಹುಬ್ಬಳ್ಳಿ: ಹುಬ್ಬಳ್ಳಿ ಸಮೀಪದ ಅದರಗುಂಚಿ ಕ್ರಾಸ್ ಬಳಿ ಲಾರಿ ಮತ್ತು ಕಾರು ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಸ್ತೆ ಪಕ್ಕ ನಿಲ್ಲಿಸಿದ ಲಾರಿಗೆ ಹಿಂಬದಿಯಿಂದ ಬಂದು ಕಾರು ಡಿಕ್ಕಿಯಾಗಿದೆ. ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ಅಯ್ಯನಾರ್ ( 35 ) ಎಂದು ಗುರುತಿಸಲಾಗಿದೆ.
ಅಪಘಾತ ನಡೆದ ಸ್ಥಳದಲ್ಲಿದ್ದ ಜನ ನಾಲ್ಕು ಜನರ ಪ್ರಾಣ ಉಳಿಸಿದ್ದಾರೆ . ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದವರ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಸೇಲಂನಿಂದ ಮುಂಬೈಗೆ ತೆರಳುತ್ತಿದ್ದರು. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.