ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿನಗರ ಸಂಪರ್ಕದ ಬಿಆರ್‌ಟಿಎಸ್ ಮಾರ್ಗದ ಅವ್ಯವಸ್ಥೆ ವಿರೋಧಿಸಿ ಧಾರವಾಡ ಧ್ವನಿ ಸಂಘಟನೆ, ಕರ್ನಾಟಕ ದಲಿತ ವಿಮೋಚನಾ ಸಮಿತಿ,ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸುರಕ್ಷತಾ ಸಂಘ ಹಾಗೂ ಜನತಾ ಶಿಕ್ಷಣ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ನವಲೂರು ಬ್ರಿಡ್ಜ್ ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾಕಾರರು ಪಾದಯಾತ್ರೆ ಸಾಗಿದರು. 'ಬಿಆರ್‌ಟಿಎಸ್ ಮಾರ್ಗದ ಅವ್ಯವಸ್ಥೆ ಸರಿಪಡಿಸಿ', 'ಯಾಲಕ್ಕಿ ಶೆಟ್ಟರ್ ಕಾಲೊನಿ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ' ಭಿತ್ತಿಫಲಕಗಳನ್ನು ಕೈಯಲ್ಲಿ ಹಿಡಿದಿದ್ದರು.
ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ಬಿಆರ್‌ಟಿಎಸ್ ವಿರುದ್ಧ ಘೋಷಣೆ ಕೂಗಿದರು.
ಈಶ್ವರ ಶಿವಳ್ಳಿ, ಪಾಲಿಕೆ ಸದಸ್ಯ ಶಿವು ಹಿರೇಮಠ, ಶಂಭು ಸಾಲಿಮನಿ, ಖಲಂಧರ ಮುಲ್ಲಾ, ಸುಧೀರ ಮಧೋಳ, ಮಂಜುನಾಥ ನೀರಲಕಟ್ಟಿ,ಪರಶುರಾಮ ಕಾಳೆ, ಗಿರೀಶ ಪೂಜಾರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.