ಹುಬ್ಬಳ್ಳಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಹುಬ್ಬಳ್ಳಿಯ ಮುಕುಂದ ಬಿ. ನಾತು (74) ಶನಿವಾರ ನಿಧನರಾದರು. ಅವರಿಗೆ ಪತ್ನಿ, ಪತ್ರಕರ್ತ ಪ್ರಶಾಂತ ನಾತು ಸೇರಿದಂತೆ ಇಬ್ಬರು ಪುತ್ರರಿದ್ದಾರೆ.
ವೃತ್ತಿಯಿಂದ ಶಿಕ್ಷಕರಾಗಿದ್ದ ಅವರು ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆ, ನ್ಯೂ ಇಂಗ್ಲಿಷ್ ಗರ್ಲ್ಸ್ ಶಾಲೆಯ ಪ್ರಾಚಾರ್ಯರಾಗಿ ನಿವೃತ್ತರಾಗಿದ್ದರು. ಶಿಕ್ಷಕರ ಹೋರಾಟ, ಚಳವಳಿ ಮತ್ತು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಧಾರವಾಡ ಜಿಲ್ಲಾ ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷರಾಗಿದ್ದರು. ನಗರದ ಈಶ್ವರ ದೇವಸ್ಥಾನದ ಪ್ರಮುಖ ಟ್ರಸ್ಟಿಗಳಲ್ಲಿ ಒಬ್ಬರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.