ADVERTISEMENT

ಹುಬ್ಬಳ್ಳಿ ಮಹಾನಗರ ಪಾಲಿಕೆ ಚುನಾವಣೆ: ಪಕ್ಷದ ಅಭ್ಯರ್ಥಿಗಳ ಪರ ಒವೈಸಿ ಪ್ರಚಾರ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 14:24 IST
Last Updated 30 ಆಗಸ್ಟ್ 2021, 14:24 IST
ಒವೈಸಿ ಪ್ರಚಾರದ ಸಂದರ್ಭ
ಒವೈಸಿ ಪ್ರಚಾರದ ಸಂದರ್ಭ   

ಹುಬ್ಬಳ್ಳಿ: ಜನ್ನತ್ ನಗರಲ್ಲಿ ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್ ಒವೈಸಿ ಅವರು, ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಸೋಮವಾರ ರಾತ್ರಿ ಪ್ರಚಾರ ನಡೆಸಿದರು.

ಇಲ್ಲಿನ ಮಸೀದಿಯಲ್ಲಿ ನಮಾಜ್ ಸಲ್ಲಿಸಿದ ಒವೈಸಿ, ಬಳಿಕ ರಸ್ತೆಯಲ್ಲಿ ತೆರಳಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಅವರನ್ನು ನೋಡಲು ರಸ್ತೆಯುದ್ದಕ್ಕೂ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT