ADVERTISEMENT

ಹುಬ್ಬಳ್ಳಿ:ಯಾರಿಗೆ ಒಲಿಯಲಿದೆ ಮೇಯರ್‌ ಪಟ್ಟ?

ಪಾಲಿಕೆ ಚುನಾವಣೆ ಇಂದು: ತಡರಾತ್ರಿವರೆಗೂ ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಕಸರತ್ತು

​ಪ್ರಜಾವಾಣಿ ವಾರ್ತೆ
Published 28 ಮೇ 2022, 3:04 IST
Last Updated 28 ಮೇ 2022, 3:04 IST
ಪಾಲಿಕೆ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆಲುವು ಪಡೆದಿದ್ದ ಚಂದ್ರಿಕಾ ಮೇಸ್ತ್ರಿ ಹಾಗೂ ಕಿಶನ್‌ ಬೆಳಗಾವಿ ನಾಯಕರ ಸಮ್ಮುಖುದಲ್ಲಿ ಹುಬ್ಬಳ್ಳಿಯಲ್ಲಿ ಶುಕ್ರವಾರ ಬಿಜೆಪಿ ಸೇರ್ಪಡೆಯಾದರು
ಪಾಲಿಕೆ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆಲುವು ಪಡೆದಿದ್ದ ಚಂದ್ರಿಕಾ ಮೇಸ್ತ್ರಿ ಹಾಗೂ ಕಿಶನ್‌ ಬೆಳಗಾವಿ ನಾಯಕರ ಸಮ್ಮುಖುದಲ್ಲಿ ಹುಬ್ಬಳ್ಳಿಯಲ್ಲಿ ಶುಕ್ರವಾರ ಬಿಜೆಪಿ ಸೇರ್ಪಡೆಯಾದರು   

ಹುಬ್ಬಳ್ಳಿ: ಫಲಿತಾಂಶ ಬಂದು ಒಂಬತ್ತು ತಿಂಗಳ ಬಳಿಕ 21ನೇ ಅವಧಿಯಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಮೇಯರ್‌ ಹಾಗೂ ಉಪಮೇಯರ್‌ ಚುನಾವಣೆ ನಡೆಯಲಿದ್ದು,ಯಾರಿಗೆ ಒಲಿಯಲಿದೆ ಅದೃಷ್ಟ ಎನ್ನುವ ಕುತೂಹಲ ಮನೆ ಮಾಡಿದೆ.

ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿರುವುದರಿಂದ ಆ ಪಕ್ಷದವರಲ್ಲಿ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ಬಿಜೆಪಿಯಲ್ಲಿ ಶುಕ್ರವಾರ ತಡರಾತ್ರಿ ತನಕವೂ ಚುರುಕಿನ ಚಟುವಟಿಕೆಗಳು ನಡೆದವು. ಇಲ್ಲಿನ ಮಹಾನಗರ ಪಾಲಿಕೆ ಕಚೇರಿಯಲ್ಲಿಶನಿವಾರಬೆಳಿಗ್ಗೆ 9.30 ಮೇಯರ್‌ ಹಾಗೂ ಉಪ ಮೇಯರ್‌ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ.

ಅಧಿಕಾರದ ಚುಕ್ಕಾಣಿ ಹಿಡಿಯಲು ಉಭಯ ಪಕ್ಷಗಳಿಗೂ 42 ಸದಸ್ಯರ ಬಲ ಅಗತ್ಯವಿದೆ.ಪಕ್ಷೇತರರಾಗಿ ಗೆಲುವು ಪಡೆದ ಒಬ್ಬರು ಈ ಹಿಂದೆಯೇಬಿಜೆಪಿ ಸೇರ್ಪಡೆಯಾಗಿದ್ದರಿಂದ ಈ ಪಕ್ಷದ ಬಲ 40ಕ್ಕೆ ಏರಿಕೆಯಾಗಿತ್ತು. ಪಕ್ಷೇತರ ಅಭ್ಯರ್ಥಿಗಳಾಗಿ ಗೆದ್ದಿರುವಚಂದ್ರಿಕಾ ಮೇಸ್ತ್ರಿ ಮತ್ತು ಕಿಶನ್‌ ಬೆಳಗಾವಿ ಅವರುಶುಕ್ರವಾರ ರಾತ್ರಿ ಬಿಜೆಪಿ ಸೇರ್ಪಡೆಯಾದರು. ಹೀಗಾಗಿ ಪಕ್ಷದ ಸಂಖ್ಯಾಬಲ ಇನ್ನಷ್ಟು ಹೆಚ್ಚಳವಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಾಸಕ ಜಗದೀಶ ಶೆಟ್ಟರ್‌ ಸಮ್ಮುಖದಲ್ಲಿ ಪಕ್ಷೇತರರು ಬಿಜೆಪಿ ಸೇರ್ಪಡೆಯಾದರು.

ADVERTISEMENT

ಅಭಿಪ್ರಾಯ ಸಂಗ್ರಹ:ಪ್ರಲ್ಹಾದ ಜೋಶಿ ಮತ್ತು ಜಗದೀಶ ಶೆಟ್ಟರ್‌ ನೇತೃತ್ವದಲ್ಲಿ ಪಾಲಿಕೆಯ ಬಿಜೆಪಿ ಸದಸ್ಯರು ಸುದೀರ್ಘ ಚರ್ಚೆ ನಡೆಸಿದರು. ಜಾತಿ ಲೆಕ್ಕಾಚಾರ ಮತ್ತು ಮುಂಬರುವ ವಿಧಾನಸಭಾ ಚುನಾವಣೆ ಮುಂದಿಟ್ಟುಕೊಂಡು ಅಭಿಪ್ರಾಯ ಸಂಗ್ರಹಿಸಿದರು.

ಮೇಯರ್‌ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಪಾಲಿಕೆ ಸದಸ್ಯರಾದ ಧಾರವಾಡದ ವೀರೇಶ ಅಂಚಟಗೇರಿ, ಹುಬ್ಬಳ್ಳಿಯ ವೀರಣ್ಣ ಸವಡಿ, ವಿಜಯಾನಂದ ಶೆಟ್ಟಿ, ಶಿವು ಮೆಣಸಿನಕಾಯಿ ಅವರ ಹೆಸರುಗಳು ಮುಂಚೂಣಿಯಲ್ಲಿದ್ದವು. ಧಾರವಾಡ ಪ್ರತ್ಯೇಕ ಪಾಲಿಕೆ ಕೂಗು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಮೊದಲ ಅವಧಿಗೆ ಮೇಯರ್‌ ಸ್ಥಾನ ಧಾರವಾಡಕ್ಕೆ ಬಿಟ್ಟುಕೊಟ್ಟರೆ ವೀರೇಶ ಅಂಚಟಗೇರಿ ಮತ್ತು ವಿಜಯಾನಂದ ಶೆಟ್ಟಿ ಮೇಯರ್‌ ಆಗಬಹುದು.

ಹಿರಿತನದ ಆಧಾರದ ಮೇಲೆ ಮೇಯರ್‌ ಸ್ಥಾನ ನೀಡುವುದಾದರೆ ವೀರಣ್ಣ ಸವಡಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.ಆದರೆ, ರಾಜಣ್ಣ ಕೊರವಿ ಕೂಡ ಮೇಯರ್‌ ಸ್ಥಾನದ ಆಕಾಂಕ್ಷಿಯಾಗಿದ್ದು, ಪೈಪೋಟಿ ಹೆಚ್ಚಿದೆ.ಬಿಜೆಪಿ ತನ್ನ ಎಲ್ಲಾ ಸದಸ್ಯರಿಗೂ ವಿಪ್‌ ಜಾರಿ ಮಾಡಿದ್ದು, ಪಕ್ಷ ಸೇರ್ಪಡೆಯಾದಚಂದ್ರಿಕಾ ಮೇಸ್ತ್ರಿ ಮತ್ತು ಕಿಶನ್‌ ಅವರಿಗೆ ಪ್ರಾಥಮಿಕ ಸದಸ್ಯತ್ವ ನೀಡಿ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ಪತ್ರ ಬರೆಯಿಸಿಕೊಂಡಿದ್ದಾರೆ.

ಬಹುಮತದ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಕೂಡ ಕೊನೆಯ ಹಂತದ ಸರ್ಕಸ್‌ ನಡೆಸುತ್ತಿದ್ದು,ಮೇಯರ್ ಸ್ಥಾನಕ್ಕೆಮಯೂರ್ ಮೋರೆ ಹಾಗೂ ಉಪಮೇಯರ್‌ ಸ್ಥಾನಕ್ಕೆ ದೀಪಾ ಸಂತೋಷ ನೀರಲಕಟ್ಟಿ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.

ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಸಭೆ ಇಂದು
ಹುಬ್ಬಳ್ಳಿ:
ಮೇಯರ್‌ ಹಾಗೂ ಉಪಮೇಯರ್‌ ಆಯ್ಕೆಗೆ ಶುಕ್ರವಾರ ತಡರಾತ್ರಿಯವರೆಗೂ ಬಿಜೆಪಿ ಕಸರತ್ತು ನಡೆಸಿತು. ಎಲ್ಲಾ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಶನಿವಾರ ಬೆಳಿಗ್ಗೆ 9 ಗಂಟೆಗೆ ನಿಗದಿಯಾಗಿರುವ ಪಕ್ಷದ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಶುಕ್ರವಾರ ಮೊದಲುಜೋಶಿ ಹಾಗೂ ಶೆಟ್ಟರ್‌ ಮೇಯರ್‌ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿದರು. ಬಳಿಕ ಪ್ರದೀಪ ಶೆಟ್ಟರ್‌, ಲಿಂಗರಾಜ ಪಾಟೀಲ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಕಪಟಕರ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಪಕ್ಷದ ಪಾಲಿಕೆ ಸದಸ್ಯರ ಅಭಿಪ್ರಾಯ ಪಡೆದರು. ಅಲ್ಲಿ ವ್ಯಕ್ತವಾದ ಅಭಿಪ್ರಾಯವನ್ನು ಮುಖಂಡರು ಜೋಶಿ ಹಾಗೂ ಶೆಟ್ಟರ್‌ ಅವರಿಗೆ ತಿಳಿಸಲಿದ್ದು, ಬಳಿಕವಷ್ಟೇ ತೀರ್ಮಾನ ಹೊರಬೀಳಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.