ADVERTISEMENT

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 4:08 IST
Last Updated 16 ಜೂನ್ 2021, 4:08 IST
   

ಹುಬ್ಬಳ್ಳಿ: ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆ ಬುಧವಾರ ಮುಂಜಾನೆಯು ಮುಂದುವರಿದಿದೆ.

ಬೆಳಿಗ್ಗೆಯಿಂದ ಬಿಟ್ಟು ಬಿಡದೆ ಮಳೆಯಾಗುತ್ತಿದೆ. ಲಾಕ್‌ಡೌನ್ ಸಡಿಲಿಕೆಯ ಅವಧಿಯಲ್ಲಿ ಬೆಳಿಗ್ಗೆ ತರಕಾರಿ, ಹಣ್ಣು ತರಲು ಹೋಗುವವರಿಗೆ ಮಳೆ ಅಡ್ಡಿಯಾಗಿದೆ.

ಬೀದಿ ಬದಿ ವ್ಯಾಪಾರಿಗಳಿಗೂ ತೊಂದರೆಯಾಗಿದೆ.

ADVERTISEMENT

ರೈತರಿಗೆ ಹರ್ಷ: ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದಕ್ಕೆ ರೈತರು ಹರ್ಷಗೊಂಡಿದ್ದಾರೆ‌. ಹಲವು ರೈತರು ಈಗಾಗಲೇ ಬಿತ್ತನೆ ಮಾಡಿದ್ದರೆ, ಹಲವರು ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.