ADVERTISEMENT

ಹುಬ್ಬಳ್ಳಿ | ಆರೋಗ್ಯ ಶಿಬಿರ: 500ಕ್ಕೂ ಅಧಿಕ ಜನರ ಆರೋಗ್ಯ ತಪಾಸಣೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2024, 16:11 IST
Last Updated 4 ಫೆಬ್ರುವರಿ 2024, 16:11 IST
ಹುಬ್ಬಳ್ಳಿ ತಾಲ್ಲೂಕಿನ ಮಂಟೂರ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು
ಹುಬ್ಬಳ್ಳಿ ತಾಲ್ಲೂಕಿನ ಮಂಟೂರ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು   

ಹುಬ್ಬಳ್ಳಿ: ತಾಲ್ಲೂಕಿನ ಮಂಟೂರ ಗ್ರಾಮದಲ್ಲಿ ಸಿ.ಐ.ಮುನವಳ್ಳಿ ಪಾಲಿಟೆಕ್ನಿಕ್ ವತಿಯಿಂದ ಆಯೋಜಿಸಿದ್ದ ಎನ್ಎಸ್ಎಸ್ ಶಿಬಿರದ ಅಂಗವಾಗಿ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

‘ಶಿಬಿರದಲ್ಲಿ ಐದುನೂರಕ್ಕೂ ಅಧಿಕ ರೋಗಿಗಳ ಆರೋಗ್ಯ ತಪಾಸಣೆ ನಡೆಸಿ ಉಚಿತವಾಗಿ ಔಷಧಗಳನ್ನು ನೀಡಲಾಯಿತು’ ಎಂದು ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಂ.ಜಿ.ಹಿರೆಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಲ್ಲಿಕಾರ್ಜುನ ಸಂಭಾಜಿ ಶಿಬಿರ ಉದ್ಘಾಟಿಸಿದರು. ಪ್ರೊ. ವಿರೇಶ ಅಂಗಡಿ ಮಾತನಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.