ಹುಬ್ಬಳ್ಳಿ: ‘ಈ ಹಿಂದೆ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ತಂದಿತ್ತು. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಈಗ ನಮ್ಮ ಸರ್ಕಾರ ಮತ್ತೆ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುತ್ತಿದೆ’ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 64ನೇ ವಾರ್ಡ್‌ನ ತಬೀಬ್ ಲ್ಯಾಂಡ್ ಬಡಾವಣೆಯಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ, ಮಾತನಾಡಿದರು.
‘ಪೂರ್ವ ವಿಧಾನಸಭಾ ಕ್ಷೇತ್ರದ ಸೋನಿಯಾಗಾಂಧಿ ನಗರ, ಎಸ್.ಎಂ.ಕೃಷ್ಣ ನಗರ, ಶಿವಶಂಕರ ಕಾಲೊನಿ ಸೇರಿದಂತೆ ಐದು ಕಡೆ ಕ್ಯಾಂಟೀನ್ ಸ್ಥಾಪಿಸಲಾಗಿದ್ದು, ಇನ್ನೂ ಕೆಲವು ಬಡಾವಣೆಗಳಲ್ಲಿ ಕ್ಯಾಂಟೀನ್ ತೆರೆಯುವ ಚಿಂತನೆ ಇದೆ’ ಎಂದರು.
‘ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಡಿಮೆ ದರದಲ್ಲಿ ಬಡವರು, ಕೂಲಿ ಕಾರ್ಮಿಕರು, ಆಟೊ ಚಾಲಕರಿಗೆ ಉತ್ತಮ ಗುಣಮಟ್ಟದ ಊಟ, ಉಪಾಹಾರ ಸಿಗುವುದರಿಂದ ಹೆಚ್ಚು ಅನುಕೂಲವಾಗಿದೆ’ ಎಂದರು.
ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಅಧಿಕಾರಿಗಳಾದ ವಿಜಯಕುಮಾರ್, ಮಲ್ಲಿಕಾರ್ಜುನ, ಮುಖಂಡರಾದ ಆಸೀಫ್ ಇಕ್ಬಾಲ್ ಬಳ್ಳಾರಿ, ಶರೀಫ್ ಅದ್ವಾನಿ, ಅಬ್ಬಾಸ ಕುಮಟಾಕರ್, ಅಫ್ರೋಜ್ ಮಂಚಿನಕೊಪ್ಪ, ಶ್ರೀನಿವಾಸ ಬೆಳದಡಿ, ಆರಿಫ್ ದೊಡ್ಡಮನಿ, ಮದನ್ ಬಚನ್, ಜಾಫರ್ ಶಾಬ್ದಿ, ಅಕ್ಬರ್ ಅಂಗಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.