ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಬಗ್ಗೆ ಚಾರ್ಜ್‌ಶೀಟ್ ಸಲ್ಲಿಸಲು ವಿಳಂಬ ಮಾಡಿದ್ದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಜಾಕ್ಸನ್ ಡಿಸೋಜಾ ಅವರನ್ನು ಅಮಾನತು ಮಾಡಲಾಗಿದೆ.
ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳು, ವಿಡಿಯೊ ವೈರಲ್
ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜ್‌ನ ಮೂವರು ವಿದ್ಯಾರ್ಥಿಗಳಾದ ಬಾಸೀತ ಸೋಪಿ, ತಾಲೀಬ್ ವಾನಿ ಅಮೀರ್, ಮೊಯಿನುದ್ದೀನ್ ವಾನಿ ಘೋಷಣೆ ಕೂಗಿದ್ದರು.
90 ದಿನಗಳ ಒಳಗೆ ಚಾರ್ಜ್‌ಶೀಟ್ ಸಲ್ಲಿಸಬೇಕಾಗಿತ್ತು. ಆದರೆ, ಸಲ್ಲಿಸಲಿರಲಿಲ್ಲ. ಇದೇ ಕಾರಣಕ್ಕೆ ಆರೋಪಿಗಳಿಗೆ ಇತ್ತೀಚೆಗೆ ಜಾಮೀನು ದೊರೆತಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.