ADVERTISEMENT

‘ಹುಬ್ಬಳ್ಳಿ ಜಗ್ಗಲಗಿ ಹಬ್ಬ’ ಇಂದು

ಅದ್ಧೂರಿ ಮೆರವಣೆಗೆ; ‌ವಿವಿಧ ಜಿಲ್ಲೆಯ ಕಲಾವಿದರು ಭಾಗಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 3:19 IST
Last Updated 20 ಮಾರ್ಚ್ 2022, 3:19 IST

ಹುಬ್ಬಳ್ಳಿ: ‘ಹೋಳಿ ಹಬ್ಬದ ಅಂಗವಾಗಿ ನಗರದ ವಿವಿಧೆಡೆ ಜಗ್ಗಲಗಿ ಹಬ್ಬ ಆಚರಿಸಲಾಗುತ್ತಿದ್ದು, ಭಾನುವಾರ ಮಧ್ಯಾಹ್ನ 3ಗಂಟೆಗೆ ಮೂರುಸಾವಿರ ಮಠದಲ್ಲಿ ಜಗ್ಗಲಗಿ ಮೆರವಣಿಗೆಗೆ ಚಾಲನೆ ನೀಡಲಾಗುವುದು’ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಗ್ಗಲಗಿ ಹಬ್ಬದ ಮೆರವಣಿಗೆ ಮೂರುಸಾವಿರ ಮಠದ ಮೈದಾನದಿಂದ ಪ್ರಾರಂಭವಾಗಿ, ವಿಕ್ಟೋರಿಯಾ ರಸ್ತೆ, ಕೊಪ್ಪಿಕರ ರಸ್ತೆ, ಬ್ರಾಡ್ ವೇ, ದುರ್ಗದಬೈಲ್ ವೃತ್ತ, ರಾಧಾಕೃಷ್ಣ ಗಲ್ಲಿ, ಬಾರದಾನಸಾಲ, ಸರಾಫ ಗಟ್ಟಿ, ಜವಳಿ ಸಾಲ, ಬೆಳಗಾಂವ್ ಗಲ್ಲಿ, ಪೆಂಡಾರ ಗಲ್ಲಿ, ತುಳಜಾಭವಾನಿ ವೃತ್ತ, ದಾಜಿದಾನಪೇಟ ಮಾರ್ಗವಾಗಿ ಸಾಗಲಿದೆ’ ಎಂದು ತಿಳಿಸಿದರು.

‘ಮೆರವಣಿಗೆಯಲ್ಲಿ ಅಂದಾಜು 200 ಜಗ್ಗಲಗಿ ಕಲಾವಿದರು,ಚರ್ಮವಾದ್ಯಗಳ ವಾದಕರು ಸೇರಿ ಒಟ್ಟು 25 ಕಲಾತಂಡಗಳು ಭಾಗವಹಿಸಲಿವೆ. ಸುಳ್ಯ, ಬ್ಯಾಹಟ್ಟಿ, ಛಬ್ಬಿ, ತಾರಿಹಾಳ, ಶಿವಳ್ಳಿ, ಕಲಘಟಗಿ, ಗುಂಡೇನಟ್ಟಿ, ತೆರವಾಡ, ಮರೆವಾಡ, ಬೊಮ್ಮಸಮುದ್ರ, ಅಮ್ಮಿನಬಾವಿ, ಗಂಗಾವತಿ, ಕಣವಿಹೊನ್ನಾಪುರ ಗ್ರಾಮಗಳಿಂದಲೂ ಕಲಾವಿದರು ಹಾಗೂ ಮಹಿಳೆಯರ ಡೊಳ್ಳು ಕುಣಿತದ ತಂಡಗಳು ಪಾಲ್ಗೊಳ್ಳಲಿವೆ’ ಎಂದರು.

ADVERTISEMENT

ಮೂರುಸಾವಿರ ಮಠ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಜಗದೀಶ ಶೆಟ್ಟರ್, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಿವು ಮೆಣಸಿನಕಾಯಿ, ಚಂದ್ರಶೇಖರ ಗೋಕಾಕ, ರವಿ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.