ADVERTISEMENT

ಹುಬ್ಬಳ್ಳಿ- ರಾಮೇಶ್ವರಂ: ರೈಲು ಸಂಚಾರ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 16:14 IST
Last Updated 13 ಜೂನ್ 2025, 16:14 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ಹುಬ್ಬಳ್ಳಿ: ಹುಬ್ಬಳ್ಳಿ– ರಾಮೇಶ್ವರಂ (07355/07356) ಎಸ್‌ಎಸ್‌ಎಸ್‌ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ಅವಧಿ ವಿಸ್ತರಣೆಗೆ ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ಈ ರೈಲು ಇನ್ನು ಮುಂದೆ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.

ADVERTISEMENT

ರಾಮೇಶ್ವರಂನಲ್ಲಿ ಕೊನೆಗೊಳ್ಳುತ್ತಿದ್ದ ಎಸ್ಎಸ್ಎಸ್ ಹುಬ್ಬಳ್ಳಿ - ರಾಮೇಶ್ವರಂ ರೈಲು (07355) ರಾಮನಾಥಪುರಂನಲ್ಲಿ ಕೊನೆಗೊಳ್ಳಲಿದೆ. ಈ ಪರಿಷ್ಕೃತ ಸೇವೆ ಜುಲೈ 5 ರಿಂದ 26 ರವರೆಗೆ ಜಾರಿಯಲ್ಲಿರುತ್ತದೆ. ರಾಮೇಶ್ವರಂ - ಎಸ್ಎಸ್ಎಸ್ ಹುಬ್ಬಳ್ಳಿ (07356) ರೈಲು, ರಾಮೇಶ್ವರಂ ಬದಲಿಗೆ ರಾಮನಾಥಪುರಂನಿಂದ ಜುಲೈ 6 ರಿಂದ 27 ರವರೆಗೆ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ.

ಎಸ್ಎಸ್ಎಸ್ ಹುಬ್ಬಳ್ಳಿ - ರಾಮೇಶ್ವರಂ ರೈಲು ಹುಬ್ಬಳ್ಳಿಯಿಂದ ಬೆಳಿಗ್ಗೆ 06:50ಕ್ಕೆ ಹೊರಟು, ಮರುದಿನ ಬೆಳಿಗ್ಗೆ 05:00ಕ್ಕೆ ರಾಮನಾಥಪುರಂ ತಲುಪಲಿದೆ. ವಾಪಾಸಾತಿ ಪ್ರಯಾಣದ ರೈಲು (07356) ರಾಮನಾಥಪುರಂನಿಂದ ರಾತ್ರಿ 10ಕ್ಕೆ ಹೊರಟು ಮರುದಿನ ಸಂಜೆ 7:40ಕ್ಕೆ ಹುಬ್ಬಳ್ಳಿ ತಲುಪಲಿದೆ. ಈ ರೈಲುಗಳು ತಮ್ಮ ಹಿಂದಿನ ಎಲ್ಲಾ ನಿಗದಿತ ನಿಲ್ದಾಣಗಳಲ್ಲಿ ನಿಲ್ಲಲಿವೆ. ಕಾರ್ಯಚರಣೆಯ ನಿರ್ಬಂಧಗಳನ್ನು ಗಮನದಲ್ಲಿ ಇಟ್ಟುಕೊಂಡು ಅನುಮೋದನೆ ನೀಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.