ADVERTISEMENT

ಹುಬ್ಬಳ್ಳಿ ಗಲಭೆ: ಎಐಎಂಐಎಂ ಮುಖಂಡ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 8:31 IST
Last Updated 21 ಏಪ್ರಿಲ್ 2022, 8:31 IST
ಹುಬ್ಬಳ್ಳಿಯಲ್ಲಿ ಗಲಭೆ ನಡೆದ ಇಂಡಿ ಪಂಪ್ ವೃತ್ತದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ವಾಹನಗಳ ಸಂಚಾರ ಸರಾಗವಾಗಿತ್ತು – ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯಲ್ಲಿ ಗಲಭೆ ನಡೆದ ಇಂಡಿ ಪಂಪ್ ವೃತ್ತದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ವಾಹನಗಳ ಸಂಚಾರ ಸರಾಗವಾಗಿತ್ತು – ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ನಗರದಲ್ಲಿ ನಡೆದ ಗಲಭೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಮೊಹಮ್ಮದ್ ಆರೀಫ್ ಎಂಬಾತನನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಆರೋಪಿ ಆರೀಫ್ ಎಐಎಂಐಎ ಪಕ್ಷದ ಸ್ಥಳೀಯ ಮುಖಂಡ ಎನ್ನಲಾಗಿದೆ. ಹಳೇ ಹುಬ್ಬಳ್ಳಿ ಠಾಣೆ ಎದುರು ಪೊಲೀಸ್ ವಾಹನ ಹತ್ತಿ ಉದ್ರಿಕ್ತರಿಗೆ ಪ್ರಚೋದನೆ ನೀಡಿದ ಆರೋಪ ಈತನ ಮೇಲಿದ್ದು, ಘಟನೆ ನಡೆದ ದಿನದಿಂದ ತಲೆಮರೆಸಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.