ADVERTISEMENT

ಹುಬ್ಬಳ್ಳಿ–ದೆಹಲಿ ವಿಮಾನ ಸೇವೆ ನ. 14ರಿಂದ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2022, 5:04 IST
Last Updated 13 ಅಕ್ಟೋಬರ್ 2022, 5:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ: ಇಂಡಿಗೊ ವಿಮಾನಯಾನ ಕಂಪನಿಯುವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ದೆಹಲಿ ನಡುವೆ ನವೆಂಬರ್ 14ರಿಂದ ನಿತ್ಯ ವಿಮಾನ ಸೇವೆ ಆರಂಭಿಸಲಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ‘ವಿಮಾನವು ಬೆಳಿಗ್ಗೆ 10ಕ್ಕೆ ದೆಹಲಿಯಿಂದ ಹೊರಟು ಹುಬ್ಬಳ್ಳಿಯನ್ನು ಮಧ್ಯಾಹ್ನ 12.45ಕ್ಕೆ ತಲುಪಲಿದೆ. ಮಧ್ಯಾಹ್ನ 1.15ಕ್ಕೆ ಹುಬ್ಬಳ್ಳಿಯಿಂದ ಹೊರಟು 3.45ಕ್ಕೆ ದೆಹಲಿ ತಲುಪಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಆರಂಭವಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT