
ಪ್ರಜಾವಾಣಿ ವಾರ್ತೆ
ಧಾರವಾಡ: ಹೂಡಿಕೆದಾರರಿಗೆ ₹ 23 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸತೀಶ್ ವುಪ್ಪಲಪಾಟಿ ಹಾಗೂ ಪತ್ನಿ ಶಿಲ್ಪಾ ಬಂಡಾ ಅವರನ್ನು ಹುಬ್ಬಳ್ಳಿ –ಧಾರವಾಡ ಬೈಪಾಸ್ ಮಾರ್ಗದಲ್ಲಿ ಬಂಧಿಸಿದ್ದಾರೆ.
‘ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಬ್ಬರೂ ಹೈದರಾಬಾದ್ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದರು. ಆರೋಪಿಗಳು ಹುಬ್ಬಳ್ಳಿ–ಧಾರವಾಢ ಬೈಪಾಸ್ ಮಾರ್ಗದಲ್ಲಿ ಕಾರಿನಲ್ಲಿ ಸಾಗುತ್ತಿರುವ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಲಾಯಿತು. ಇಬ್ಬರನ್ನೂ ಹೈದರಾಬಾದ್ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ’ ಎಂದು ಜಿಲ್ಲಾ ಪೊಲಿಸ್ ವರಿಷ್ಠಧಿಕಾರಿ ಗುಂಜನ್ ಆರ್ಯ ತಿಳಿಸಿದರು.
ಇಬ್ಬರೂ ಹೈದರಾಬಾದ್‌ನವರು. ಆರೋಪಿಗಳ ವಿರುದ್ಧ ಹೈದರಬಾದ್‌ನ ಸೆಂಟ್ರಲ್ ಕ್ರೈಂ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.