ಸತೀಶ ಜಾರಕಿಹೊಳಿ
ಹುಬ್ಬಳ್ಳಿ: ‘ಮಧುಬಲೆ ಮಾಡಿಸಿದ ಮಹಾನಾಯಕ ಯಾರು ಎಂಬುದನ್ನು ಸಮಯ ಬಂದಾಗ ತಿಳಿಸುವೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ಪೊಲೀಸ್ ದೂರು ನೀಡಿದ್ದಾರೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೊದಲು ಪೊಲೀಸರು ತನಿಖೆ ನಡೆಸಲಿ. ಮಹಾನಾಯಕ ಯಾರು ಎಂದು ಕಾದು ನೋಡೋಣ’ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಅಧ್ಯಕ್ಷರ ಬದಲಾವಣೆ ನಮ್ಮ ಹಂತದಲ್ಲಿ ಇಲ್ಲ. ಅದರ ಕುರಿತು ನಿರ್ಣಯವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.